195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಿಎಂಗೆ ಪ್ರಸ್ತಾವನೆ

ಇಂದು ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಚಿವ ಪ್ರಿಯಾಂಕ್  ಖರ್ಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ..

Written by - Manjunath N | Last Updated : Sep 13, 2023, 09:17 PM IST
  • ಕುಡಿಯುವ ನೀರಿನ ಪೂರೈಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು,
  • ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು SDRF ಅನುದಾನವನ್ನೂ ಬಳಸಿಕೊಳ್ಳಲಾಗುವುದು.
  • ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ, ಈಗಾಗಲೇ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ₹492 ಕೋಟಿ ಅನುದಾನ ಒದಗಿಸಲಾಗಿದೆ.
195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಿಎಂಗೆ ಪ್ರಸ್ತಾವನೆ title=

ಬೆಂಗಳೂರು: ಇಂದು ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಚಿವ ಪ್ರಿಯಾಂಕ್  ಖರ್ಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ..

ಈ ಬರಪೀಡಿತ ತಾಲೂಕುಗಳ ನಿರ್ವಹಣೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ:

- ಕುಡಿಯುವ ನೀರಿನ ಪೂರೈಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು SDRF ಅನುದಾನವನ್ನೂ ಬಳಸಿಕೊಳ್ಳಲಾಗುವುದು.

- ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ, ಈಗಾಗಲೇ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ₹492 ಕೋಟಿ ಅನುದಾನ ಒದಗಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ ₹400 ಕೋಟಿ ಹಣವನ್ನು ಮೀಸಲಿಡಲಾಗಿದೆ.

- ನಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಸಿಇಒ ಗಳಿಗೆ ಈಗಾಗಲೇ ₹1 ಕೋಟಿ ಅನುದಾನ ನೀಡಿದ್ದು, ಹೆಚ್ಚುವರಿಯಾಗಿ ಕಂಟೆಂಜೆನ್ಸಿ ಯೋಜನೆ ಅಡಿಯಲ್ಲಿ ₹7 ಕೋಟಿ ನೀಡಲಾಗಿದೆ.

- ಜಾನುವಾರುಗಳಿಗೆ ಮೇವು ಖರೀದಿಗಾಗಿ ಈಗಾಗಲೇ ₹20 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಮೇವು ಬೆಳೆಯುವುದಕ್ಕಾಗಿ ರೈತರಿಗೆ ಉಚಿತ ಬಿತ್ತನೆ ಬೀಜವನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.

- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭತ್ತ ಮತ್ತು ಮೆಕ್ಕೆಜೋಳದ ಬೆಳೆಗಳನ್ನು ಖರೀದಿ ಮಾಡಿ ದಾಸ್ತಾನು ಮಾಡಲು ಕ್ರಮ ವಹಿಸಲಾಗಿದೆ.

- ಬರಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕಡ್ಡಾಯವಾಗಿ ಕೆಲಸದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

ಬರ ಪರಿಸ್ಥಿತಿಯಿಂದ ರಾಜ್ಯದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸರ್ಕಾರವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ರಾಜ್ಯವು ಈ ವರ್ಷ ಅತ್ಯಂತ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯ ಸರ್ಕಾರವು ಯಾವುದೇ ಸಂದರ್ಭವನ್ನು ಎದುರಿಸಲು ಸರ್ವ ರೀತಿಯಲ್ಲಿಯೂ ಸನ್ನದ್ಧವಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News