195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಿಎಂಗೆ ಪ್ರಸ್ತಾವನೆ
ಇಂದು ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ..
ಬೆಂಗಳೂರು: ಇಂದು ರಾಜ್ಯ ಸರ್ಕಾರದ ಸಂಪುಟ ಉಪಸಮಿತಿಯು 195 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ..
ಈ ಬರಪೀಡಿತ ತಾಲೂಕುಗಳ ನಿರ್ವಹಣೆಗಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ:
- ಕುಡಿಯುವ ನೀರಿನ ಪೂರೈಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು SDRF ಅನುದಾನವನ್ನೂ ಬಳಸಿಕೊಳ್ಳಲಾಗುವುದು.
- ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ, ಈಗಾಗಲೇ ಸರ್ಕಾರವು ಎಲ್ಲಾ ಜಿಲ್ಲಾಧಿಕಾರಿಗಳಿಗೆ ₹492 ಕೋಟಿ ಅನುದಾನ ಒದಗಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ ₹400 ಕೋಟಿ ಹಣವನ್ನು ಮೀಸಲಿಡಲಾಗಿದೆ.
- ನಮ್ಮ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಸಿಇಒ ಗಳಿಗೆ ಈಗಾಗಲೇ ₹1 ಕೋಟಿ ಅನುದಾನ ನೀಡಿದ್ದು, ಹೆಚ್ಚುವರಿಯಾಗಿ ಕಂಟೆಂಜೆನ್ಸಿ ಯೋಜನೆ ಅಡಿಯಲ್ಲಿ ₹7 ಕೋಟಿ ನೀಡಲಾಗಿದೆ.
- ಜಾನುವಾರುಗಳಿಗೆ ಮೇವು ಖರೀದಿಗಾಗಿ ಈಗಾಗಲೇ ₹20 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಮೇವು ಬೆಳೆಯುವುದಕ್ಕಾಗಿ ರೈತರಿಗೆ ಉಚಿತ ಬಿತ್ತನೆ ಬೀಜವನ್ನು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.
- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭತ್ತ ಮತ್ತು ಮೆಕ್ಕೆಜೋಳದ ಬೆಳೆಗಳನ್ನು ಖರೀದಿ ಮಾಡಿ ದಾಸ್ತಾನು ಮಾಡಲು ಕ್ರಮ ವಹಿಸಲಾಗಿದೆ.
- ಬರಪೀಡಿತ ತಾಲೂಕುಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕಡ್ಡಾಯವಾಗಿ ಕೆಲಸದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
ಬರ ಪರಿಸ್ಥಿತಿಯಿಂದ ರಾಜ್ಯದ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನಮ್ಮ ಸರ್ಕಾರವು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ರಾಜ್ಯವು ಈ ವರ್ಷ ಅತ್ಯಂತ ಭೀಕರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರಾಜ್ಯ ಸರ್ಕಾರವು ಯಾವುದೇ ಸಂದರ್ಭವನ್ನು ಎದುರಿಸಲು ಸರ್ವ ರೀತಿಯಲ್ಲಿಯೂ ಸನ್ನದ್ಧವಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.