bhagyalaxmi yojana : ಇಂದು ವಿಧಾನಪರಿಷತ್ ನಲ್ಲಿ  ಹೆಣ್ಣು ಮಕ್ಕಳ ಭವಿಷ್ಯಕ್ಕೆ ಭರವಸೆಯಾದ 'ಭಾಗ್ಯಲಕ್ಷ್ಮಿ ಯೋಜನೆ'ಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ, ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯನ್ನು ಮುಂದುವರಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು. 


COMMERCIAL BREAK
SCROLL TO CONTINUE READING

 ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಗುವಿಗೆ ಆರ್ಥಿಕ ನೆರವಿನ ಮೂಲಕ ಸಬಲೀಕರಣಗೊಳಿಸಿ ಸ್ವಾವಲಂಬಿಯಾಗಿ ಮಾಡುವ ಯೋಜನೆ ಇದಾಗಿದೆ. 2006ನೇ ಸಾಲಿನಿಂದ ಈ ಯೋಜನೆ ಅನುಷ್ಠಾನದಲ್ಲಿದೆ ಎಂದು ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಎನ್. ರವಿಕುಮಾರ್ ಕೇಳಿದ ಪ್ರಶ್ನೆಗೆ  ಸಚಿವರು ಉತ್ತರಿಸಿದರು. 


ಇದನ್ನು ಓದಿ :ಒಡಿಸ್ಸಿಯಸ್ ಲ್ಯಾಂಡರ್‌ಗೆ ಚಂದ್ರನ ಸ್ವಾಗತ: ಖಾಸಗಿ ಬಾಹ್ಯಾಕಾಶ ವಲಯದ ಭಾರೀ ಯಶಸ್ಸು


ಸುಕನ್ಯಾ ಸಮೃದ್ಧಿ ಯೋಜನೆ ಕೇಂದ್ರ ಸರ್ಕಾರದ್ದು ಎಂದು ಪ್ರಸ್ತಾಪಿಸಿದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದು ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಯಲ್ಲ; ಇದು ರಾಜ್ಯ ಸರ್ಕಾರದ ಪ್ರತ್ಯೇಕ ಯೋಜನೆ. ಇತ್ತೀಚೆಗೆ ನಮ್ಮ ಸರ್ಕಾರ ಈ ಯೋಜನೆಯಲ್ಲಿ ಸ್ವಲ್ಪ ಮಾರ್ಪಾಡು ಮಾಡಿದೆ ಅಷ್ಟೇ ಎಂದು ತಿಳಿಸಿದರು.


ಭಾಗ್ಯಲಕ್ಷ್ಮೀ ಯೋಜನೆಯಡಿ  ಮಗುವಿನ ಹೆಸರಿನಲ್ಲಿ ವಾರ್ಷಿಕ 3 ಸಾವಿರ ರೂಪಾಯಿನಂತೆ 15 ವರ್ಷಗಳವರೆಗೆ ಒಟ್ಟು 45 ಸಾವಿರ ರೂಪಾಯಿಗಳನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ.


ಇದನ್ನು ಓದಿ :Ayodhya RamMandir 10KG ಚಿನ್ನ 25KG ಬೆಳ್ಳಿ, ಬಾಲರಾಮನಿಗೆ ಭಕ್ತರಿಂದ ಹರಿದುಬಂದ ಕಾಣಿಕೆ ಎಷ್ಟು?


 ಉನ್ನತ ವಿದ್ಯಾಭ್ಯಾಸಕ್ಕಾಗಿ ಖಾತೆಯಲ್ಲಿರುವ ಮೊತ್ತದ ಶೇ.50ರಷ್ಟು ಭಾಗವನ್ನು ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಅಂದಾಜು ಪರಿಪಕ್ವ ಮೊತ್ತವನ್ನು ನೀಡಲಾಗುವುದು. 18 ವರ್ಷ ಪೂರ್ಣಗೊಂಡ ನಂತರ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.