ಬೆಂಬಲ ಬೆಲೆಯೊಂದಿಗೆ ವರ್ಷವಿಡೀ ಕೊಬ್ಬರಿ  ಖರೀದಿಗೆ ಕೇಂದ್ರಕ್ಕೆ ಪ್ರಸ್ತಾವನೆ : ಸಚಿವ ಸಂಪುಟ ಉಪಸಮಿತಿ ತೀರ್ಮಾನ

ಕೊಬ್ಬರಿ ಸರ್ವಋತು ಬೆಳೆಯಾಗಿರುವುದರಿಂದ ವರ್ಷ ಪೂರ್ತಿ ಬೆಂಬಲ‌ ಬೆಲೆ ನೀಡಿ ಖರೀದಿಸಲು‌ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

Written by - Prashobh Devanahalli | Edited by - Manjunath N | Last Updated : Aug 31, 2023, 10:40 PM IST
  • ನಿಗಧಿತ 54750 ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಸಂಪೂರ್ಣ ಗುರಿ ಸಾಧಿಸಬೇಕು
  • ಜೊತೆಗೆ ತೆಂಗನ್ನೂ ಬೆಂಬಲ ಬೆಲೆಯೊಂದಿಗೆ ಖರೀದಿಸಬೇಕೆಂದು ಕೇಂದ್ರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು
  • ಕೇರಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಕೊಬ್ಬರಿ ಉತ್ಪನ್ನಗಳ ಮೌಲ್ಯ ವರ್ಧನೆಗೆ ಗಮನ ಹರಿಸಬೇಕು ಎಂದೂ ಸಮಿತಿ ಸಲಹೆ ನೀಡಿತು
ಬೆಂಬಲ ಬೆಲೆಯೊಂದಿಗೆ ವರ್ಷವಿಡೀ ಕೊಬ್ಬರಿ  ಖರೀದಿಗೆ ಕೇಂದ್ರಕ್ಕೆ ಪ್ರಸ್ತಾವನೆ : ಸಚಿವ ಸಂಪುಟ ಉಪಸಮಿತಿ ತೀರ್ಮಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊಬ್ಬರಿ ಸರ್ವಋತು ಬೆಳೆಯಾಗಿರುವುದರಿಂದ ವರ್ಷ ಪೂರ್ತಿ ಬೆಂಬಲ‌ ಬೆಲೆ ನೀಡಿ ಖರೀದಿಸಲು‌ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಹಲವು ಬೆಳೆಗಳ ಬೆಲೆ ಸ್ಥಿರೀಕರಣ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಕಾನೂನು ‌ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ ಪಾಟೀಲ್, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್ ಮುನಿಯಪ್ಪ, ಸಹಕಾರ ಸಚಿವರಾದ ಕೆ.ಎನ್ ರಾಜಣ್ಣ, ಸಕ್ಕರೆ,ಕೃಷಿ ಉತ್ಪನ ಮಾರುಕಟ್ಟೆ ಸಮಿತಿ ಸಚಿವರಾದ ಶಿವಾನಂದ ಪಾಟೀಲ್  ಅವರನೊಳಗೊಂಡ ಸಚಿವ ಸಂಪುಟ ಉಪ ಸಮಿತಿ ಹಲವು ಈ ಮಹತ್ವದ ನಿರ್ಣಯ ಕೈಗೊಂಡಿತು.

 ಇದನ್ನೂ ಓದಿ-HD Kumaraswamy Health Updates: ಎಚ್​​ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ​ ಹೇಳಿದ್ದೇನು..?

ನಿಗಧಿತ 54750 ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಸಂಪೂರ್ಣ ಗುರಿ  ಸಾಧಿಸಬೇಕು , ಜೊತೆಗೆ ತೆಂಗನ್ನೂ ಬೆಂಬಲ ಬೆಲೆಯೊಂದಿಗೆ ಖರೀದಿಸಬೇಕೆಂದು ಕೇಂದ್ರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.ಕೇರಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಕೊಬ್ಬರಿ ಉತ್ಪನ್ನಗಳ  ಮೌಲ್ಯ ವರ್ಧನೆಗೆ ಗಮನ ಹರಿಸಬೇಕು ಎಂದೂ ಸಮಿತಿ ಸಲಹೆ ನೀಡಿತು.ಕೃಷಿ ಆವರ್ತ ನಿಧಿಗೆ ಖಾಯಂ ಅನುದಾನ ಒದಗಿಸಬೇಕು. ಅದರ ಒಟ್ಟು ಪ್ರಮಾಣ ಏರಿಕೆಯಾಗುತ್ತಾ ಹೋಗಬೇಕು ಎಂದು ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.

ಮಧ್ಯವರ್ತಿಗಳಿಗೆ ಲಾಭ ಮಾಡದೆ ರೈತರಿಗೆ ಅನುಕೂಲವಾಗುವಂತೆ ಸಕಾಲದಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಮಾಡಬೇಕು ಹಾಗೂ  ಖರೀದಿಸಿದ ಉತ್ಪನ್ನಗಳಿಗೆ ತಕ್ಷಣ ಹಣದ ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.ಚಾಮರಾಜನಗರ ರೈತರಿಂದ  ಅರಿಶಿಣ ಖರೀದಿಸಿ ಹಣ ನೀಡಿಕೆ ವಿಳಂಬ ಮಾಡಿದ್ದ ಪ್ರಕರಣಗಳಲ್ಲಿ 53 ರೈತರಿಗೆ ಬಡ್ಡಿ ಸೇರಿಸಿ ನೀಡುವಂತೆ ಸಮಿತಿ ಸೂಚನೆ ನೀಡಿತು.

 ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ : ಚಾಮರಾಜನಗರದಲ್ಲಿ ರೈತರ ಪ್ರತಿಭಟನೆ

ಮುಂಬರುವ ಜನವರಿಯಿಂದ ಬೆಂಬಲ ಬೆಲೆಯೊಂದಿಗೆ ಭತ್ತ,ರಾಗಿ ,ಜೋಳ ಖರೀದಿಸಬೇಕು ಈ ಹಿಂದೆ ಆದಂತೆ ಯಾವುದೇ ಲೋಪಗಳಾಗದೆ ರೈತರಿಗೆ ಅನುಕೂಲ ಮಾಡಿ,ನಿಯಮಾನುಸಾರ  ಖರೀದಿಸಬೇಕು ಎಂದು ಸಚಿವ ಸಂಪುಟ ಉಪ ಸಮಿತಿ ಸೂಚಿಸಿತು.ಈರುಳ್ಳಿ ರಫ್ತಿನ ಮೇಲೆ ಅಧಿಕ ತೆರಿಗೆ ವಿಧಿಸಿರುವುದರಿಂದ ರೈತರಿಗೆ ಉತ್ತಮ ದರ ಪಡೆಯುವ ಅವಕಾಶ ತಪ್ಪಿದೆ ಈ ಬಗ್ಗೆ ಕೇಂದ್ರ ಕ್ರಮ ವಹಿಸಬೇಕು ಎಂದು ಒತ್ತಾಯಿಸಲು ಸಮಿತಿ ನಿರ್ಣಯಿಸಿತು.ಆವರ್ತ ನಿಧಿ ಬಳಸಿ ಬೇರೆ ಬೇರೆ ಇಲಾಖೆಗಳು ಖರೀದಿ ಮಾಡಿದ್ದು ಅದನ್ನು ಆದಷ್ಟು ಬೇಗ ಮರುಪಾವತಿ ಮಾಡಬೇಕು.ಇದಕ್ಕೆ ಹಣಕಾಸು ಇಲಾಖೆ ಮಧ್ಯಪ್ರವೇಶ ಮಾಡಿ ನೆರವಾಗಬೇಕು.ಇನ್ನು ಮುಂದೆ ಆವರ್ತ ನಿಧಿ ಬಳಸಿದರೆ ಅದಕ್ಕೆ ಸೂಕ್ತ ಬಡ್ಡಿ ಪಾವತಿ ಮಾಡಿ ಹಿಂದಿರಿಗಿಸಬೇಕು ಎಂದು ಸಂಬಂದ ಪಟ್ಟ ಏಜೆನ್ಸಿಗಳು, ಇಲಾಖೆಗಳಿಗೆ ಸೂಚನೆ ನೀಡಲು ಉಪ ಸಮಿತಿ ತೀರ್ಮಾನಿಸಿತು.

ಪಡಿತರ ಅಹಾರ ಸಾಮಗ್ರಿ ಖರೀದಿ ಪ್ರಕ್ರಿಯೆಯಲ್ಲಿ ಕೇಂದ್ರದ ಸಂಸ್ಥೆಗಳ ಜೊತೆಗೆ ರಾಜ್ಯದ ಸಂಸ್ಥೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಸಮತಿ ಸಲಹೆ ನೀಡಿತು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News