ಬೆಳಗಾವಿ: ಕಬ್ಬು ಬೆಳೆಗಾರರಿಗೆ ಒಪ್ಪಂದದಂತೆ ನೀಡಬೇಕಾಗಿದ್ದ ಬಾಕಿ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿ, ಬಾಕಿ ಪಾವತಿಗೆ ಸೂಚನೆ ನೀಡಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಪ್ರತಿಭಟನಾ ನಿರತ ಕಬ್ಬು ಬೆಳೆಗಾರರನ್ನು ತಮ್ಮ ಕಛೇರಿಯಲ್ಲಿ ಭೇಟಿಯಾದ ಮುಖ್ಯಮಂತ್ರಿಗಳು ಸಕ್ಕರೆ ಇಲಾಖೆ ಕಾರ್ಯದರ್ಶಿ, ಆಯುಕ್ತರು ಹಾಗೂ ಬೆಳಗಾವಿ ಜಿಲ್ಲಾಧಿಕಾರಿಗಳು ಈ ಕುರಿತು ಕ್ರಮ ಕೈಗೊಂಡು, ಕಬ್ಬು ಬೆಳೆಗಾರರ ಹಿತ ರಕ್ಷಿಸುವಂತೆ ನಿರ್ದೇಶನ ನೀಡಿದರು. ಸಕ್ಕರೆ ಇಲಾಖೇ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ, ಸಕ್ಕರೆ ಆಯುಕ್ತ ಅಜಯ್ ನಾಗಭೂಷಣ್ ಮೊದಲಾದವರು ಉಪಸ್ಥಿತರಿದ್ದರು.


ಅದರಂತೆ ಇಂದು ಬೆಳಿಗ್ಗೆ 10.30 ಗಂಟೆಗೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಿರಿಯ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.