ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ: ಸಿಎಂ ಸಿದ್ದರಾಮಯ್ಯ
ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಯ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಸಿದರು.
ಇದನ್ನೂ ಓದಿ: ಸಿದ್ದರಾಮಯ್ಯ ಘೋಷಿಸಿದಂತೆ ರಾಜ್ಯದ ಜನತೆಗೆ ಒಟ್ಟು 15 ಕೆಜಿ ಅಕ್ಕಿ ದೊರೆಯಬೇಕು: ಬಿಜೆಪಿ
ಆರೆಸೆಸ್ಸ್ ಕಾರ್ಯಕ್ರಮದಲ್ಲಿ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೆಸರು..! ಸ್ಪಷ್ಟನೆ ನೀಡಿದ ನಿರ್ದೇಶಕರು
ಸಿಎಂ ಸಿದ್ದರಾಮಯ್ಯ ಟ್ವೀಟ್:
ಇನ್ನು ಕ್ರೈಸ್ತ ಸಮುದಾಯದ ಮುಖಂಡರು ಭೇಟಿಯಾಗಿರುವ ಕುರಿತು ಸಿಎಂ ಸಿದ್ದರಾಮಯ್ಯರ ಕಚೇರಿಯಿಂದ ಟ್ವೀಟ್ ಮಾಡಲಾಗಿದೆ. ‘ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ನೇತೃತ್ವದಲ್ಲಿ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿ ತಮ್ಮ ಸಮುದಾಯದ ಸಮಸ್ಯೆಗಳನ್ನು ಚರ್ಚಿಸಿ, ಬೇಡಿಕೆಗಳ ಮನವಿಪತ್ರವನ್ನು ನೀಡಿದರು’ ಎಂದು ತಿಳಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.