ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ-ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

Written by - Zee Kannada News Desk | Last Updated : Dec 11, 2022, 11:21 PM IST
  • ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ನೀಡಿದ್ದರು.
  • ಕಾಯ್ದೆಯ ಅಂತಿಮ ಕರಡು ಕಾನೂನು ಇಲಾಖೆಯಲ್ಲಿರುವುದಾಗಿ ಸಂಘವು ಮನವಿ ಪತ್ರದಲ್ಲಿ ತಿಳಿಸಿದೆ.
  • ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕಾರ್ಯದರ್ಶಿ ಟಿ. ಜಿ.ರವಿ, ಖಜಾಂಚಿ ಹರೀಶ್ ಎಂ.ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ  ಮಸೂದೆ ಮಂಡನೆ-ಸಿಎಂ ಬೊಮ್ಮಾಯಿ title=

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇದನ್ನೂ ಓದಿ: Trending Video : ಟಾಪ್‌ಲೆಸ್‌ ಆಗಿ ಬಾಲ್ಕನಿಗೆ ಬಂದ ನಟಿ.! ಚಳಿಯಲ್ಲಿ ಹೀಗೆಲ್ಲಾ ಮಾಡಿದ್ರೆ ಹೇಗ್‌ ಗುರು?

ಅವರು ಇಂದು ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ ವಕೀಲರ ಸಂಘದ ನಿಯೋಗಕ್ಕೆ ಈ ವಿಷಯ ತಿಳಿಸಿದರು.ಇತ್ತೀಚಿನ ದಿನಗಳಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ  ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆಯನ್ನು ಡಿಸೆಂಬರ್ 18 ರಿಂದ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳನ್ನು  ವಕೀಲರ ಸಂಘ, ಬೆಂಗಳೂರು ಹಾಗೂ ರಾಜ್ಯದ ವಿವಿಧ ವಕೀಲ ಸಂಘಗಳು ಕೋರಿವೆ. 

ಇದನ್ನೂ ಓದಿ: ʼಜಸ್ಟ್ ಪಾಸ್ʼ ನಟ ಶ್ರೀಗೆ ಸಿಕ್ಳು ಸೂಪರ್‌ ಹೀರೋಯಿನ್ : ಡಿ.14ಕ್ಕೆ ಸೆಟ್ಟೇರಲಿದೆ ಸಿನಿಮಾ

ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು  ಈ ಬಗ್ಗೆ ಭರವಸೆ ನೀಡಿದ್ದರು. ಕಾಯ್ದೆಯ ಅಂತಿಮ ಕರಡು ಕಾನೂನು ಇಲಾಖೆಯಲ್ಲಿರುವುದಾಗಿ ಸಂಘವು ಮನವಿ ಪತ್ರದಲ್ಲಿ ತಿಳಿಸಿದೆ. ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕಾರ್ಯದರ್ಶಿ ಟಿ. ಜಿ.ರವಿ, ಖಜಾಂಚಿ ಹರೀಶ್ ಎಂ.ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News