ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ-ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ಇಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಇದನ್ನೂ ಓದಿ: Trending Video : ಟಾಪ್‌ಲೆಸ್ ಆಗಿ ಬಾಲ್ಕನಿಗೆ ಬಂದ ನಟಿ.! ಚಳಿಯಲ್ಲಿ ಹೀಗೆಲ್ಲಾ ಮಾಡಿದ್ರೆ ಹೇಗ್ ಗುರು?
ಅವರು ಇಂದು ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ ವಕೀಲರ ಸಂಘದ ನಿಯೋಗಕ್ಕೆ ಈ ವಿಷಯ ತಿಳಿಸಿದರು.ಇತ್ತೀಚಿನ ದಿನಗಳಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆಯನ್ನು ಡಿಸೆಂಬರ್ 18 ರಿಂದ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳನ್ನು ವಕೀಲರ ಸಂಘ, ಬೆಂಗಳೂರು ಹಾಗೂ ರಾಜ್ಯದ ವಿವಿಧ ವಕೀಲ ಸಂಘಗಳು ಕೋರಿವೆ. ʼಜಸ್ಟ್ ಪಾಸ್ʼ ನಟ ಶ್ರೀಗೆ ಸಿಕ್ಳು ಸೂಪರ್ ಹೀರೋಯಿನ್ : ಡಿ.14ಕ್ಕೆ ಸೆಟ್ಟೇರಲಿದೆ ಸಿನಿಮಾ
ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ನೀಡಿದ್ದರು. ಕಾಯ್ದೆಯ ಅಂತಿಮ ಕರಡು ಕಾನೂನು ಇಲಾಖೆಯಲ್ಲಿರುವುದಾಗಿ ಸಂಘವು ಮನವಿ ಪತ್ರದಲ್ಲಿ ತಿಳಿಸಿದೆ. ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕಾರ್ಯದರ್ಶಿ ಟಿ. ಜಿ.ರವಿ, ಖಜಾಂಚಿ ಹರೀಶ್ ಎಂ.ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.