ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ: ಮುಖ್ಯಮಂತ್ರಿ ಸಿದ್ದರಾಮಯ್ಯ

CM Siddaramaiah: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು,ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  

Written by - Savita M B | Last Updated : Nov 26, 2023, 02:12 PM IST
  • ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ
  • ಇಂದು ಸಂವಿಧಾನ ಅಂಗೀಕರಾವಾದ ದಿನ.
  • ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ
ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ: ಮುಖ್ಯಮಂತ್ರಿ ಸಿದ್ದರಾಮಯ್ಯ title=

ಬೆಂಗಳೂರು, ನವೆಂಬರ್ 26: ಅವರು ಇಂದು  ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
 
ಇಂದು ಸಂವಿಧಾನ ಅಂಗೀಕರಾವಾದ ದಿನ. 1949,ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು.

ಇದನ್ನೂ ಓದಿ-ಎರಡು ಟ್ಯಾಂಕರ್ ಗಳ ನಡುವೆ‌ ಭೀಕರ ಅಪಘಾತ

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ :
ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.

ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯುತ್ತಿದೆ :
ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’  ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು ಮಹಾತ್ಮಾ ಗಾಂಧಿ, ಜವಾಹರ್ ಲಾಲ್ ನೆಹರೂ ಅವರು ಕನಸು ಕಂಡಿದ್ದರು.  ನಮ್ಮ ಸರ್ಕಾರದ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದರು.

ಇದನ್ನೂ ಓದಿ-ಇಂದು ಭಾರತ - ಆಸ್ಟ್ರೇಲಿಯಾ 2ನೇ ಟಿ20 ಪಂದ್ಯ

ಭ್ರೂಣ ಹತ್ಯೆ:
ಮಂಡ್ಯ ಮತ್ತುಮೈಸೂರು ಭಾಗಗಳಲ್ಲಿ ಭ್ರೂಣ ಹತ್ಯೆ ವ್ಯಾಪಕವಾಗಿ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಭ್ರೂಣಹತ್ಯೆ ಪ್ರಕರಣಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಸಂಬಂಧಪಟ್ಟವರ ಜೊತೆ ಸಭೆ ನಡೆಸಲಾಗುವುದು ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News