ನವದೆಹಲಿ: ಮಹಾತ್ಮಾ ಗಾಂಧೀಜಿಯವರ 148ನೇ ಜಯಂತಿ ಹಿನ್ನೆಲೆಯಲ್ಲಿ ಗೌರಿ ಹತ್ಯೆ ಮತ್ತು ಮಾಧ್ಯಮ ಸ್ವತಂತ್ರ್ಯಕ್ಕೆ ಧಕ್ಕೆ ಆಗುತ್ತಿರಯವುದನ್ನು ಖಂಡಿಸಿ ನವದೆಹಲಿಯಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿದರು.


COMMERCIAL BREAK
SCROLL TO CONTINUE READING

ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಮಹಿಳಾ ಪ್ರೆಸ್ ಕ್ಲಬ್ ಮತ್ತಿತರ ಸಂಘಟನೆಗಳು ನೀಡಿದ್ದ ಪ್ರತಿಭಟನೆಯಲ್ಲಿ ನೂರಾರು ಪತ್ರಕರ್ತರು ಭಾಗವಹಿಸಿದ್ದರು.


ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸುತ್ತ ಮಾನವ ಸರಪಳಿ ನಿರ್ಮಿಸಿ ಪ್ರತಿರೋಧ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನಂತರ ಅಲ್ಲಿಂದ ಮಹಿಳಾ ಪ್ರೆಸ್ ಕ್ಲಬ್ ವರೆಗೆ ಮೆರವಣಿಗೆ ಮಾಡಿದರು. ಮೌನವಾಗಿಯೇ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ಮೌನವಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಡೆಯನ್ನು ಖಂಡಿಸಿದರು. ಜೊತೆಜೊತೆಗೆ ಸಹಿ ಸಂಗ್ರಹಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಿದರು.