ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್‌ ಅಶೋಕ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ.

Written by - Prashobh Devanahalli | Last Updated : Mar 11, 2025, 07:34 PM IST
    • ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ
    • ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾಯಿತ ಶಾಸಕರು ಇರುತ್ತಾರೆ
    • ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿಕೆ
ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆ ವಿರೋಧಿಸಿ ಪ್ರತಿಭಟನೆ, ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ ನಾಯಕ ಆರ್‌ ಅಶೋಕ
File Photo

ಬೆಂಗಳೂರು: ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದರು.

Add Zee News as a Preferred Source

ಇದನ್ನೂ ಓದಿ:  ತುಳಸಿ ಎಲೆ ಕಿವುಚಿ ಈ ಪುಡಿ ಬೆರೆಸಿ ತಲೆಗೆ ಹಚ್ಚಿದರೆ 10 ನಿಮಿಷದಲ್ಲೇ ಬಿಳಿ ಕೂದಲು ಗಾಢ ಕಪ್ಪಾಗುವುದು! ದಷ್ಟಪುಷ್ಟವಾಗಿ ಮಾರುದ್ದ ಬೆಳೆಯುತ್ತೆ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತೆರಿಗೆದಾರರ ಹಣವನ್ನು ಪೋಲು ಮಾಡುತ್ತಿದೆ. ಆ ಹಣವನ್ನು ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ನೇಮಿಸಿ, 25,000 ರೂ. ಸಂಬಳ ನೀಡಿ, ಅವರಿಗೆ ಆಪ್ತ ಸಹಾಯಕರನ್ನು ನೇಮಿಸಲಾಗುತ್ತಿದೆ. 1,100 ರೂ. ಸಿಟ್ಟಿಂಗ್‌ ಫೀಸ್‌ ನಿಗದಿಪಡಿಸಲಾಗಿದೆ. ರಾಜ್ಯದ ಅಧ್ಯಕ್ಷನಿಗೆ 40,000 ರೂ. ಸಂಬಳ, ಉಪಾಧ್ಯಕ್ಷನಿಗೆ 25,000 ರೂ. ಸಂಬಳ ನೀಡಲಾಗುತ್ತಿದೆ. ಪ್ರತಿ ವರ್ಷ 15-20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ ಎಂದರು.

ಸರ್ಕಾರದ ಹಣ ಬಡವರಿಗೆ ತಲುಪಬೇಕು. ಅಂಗನವಾಡಿಯಲ್ಲಿ ಅಡುಗೆ ಮಾಡುವವರಿಗೆ 3,000 ರೂ. ಗೌರವಧನ, ಆಶಾ ಕಾರ್ಯಕರ್ತೆಯರಿಗೆ 7,000 ರೂ. ಗೌರವಧನ, ಅತಿಥಿ ಶಿಕ್ಷಕರಿಗೆ 12,000 ರೂ. ನೀಡಲಾಗುತ್ತಿದೆ. ಇದೇ ಹಣವನ್ನು ವಿಶ್ವವಿದ್ಯಾಲಯಗಳಿಗೆ ನೀಡಬಹುದಿತ್ತು ಅಥವಾ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ನೀಡಬಹುದಿತ್ತು. ಕಾಂಗ್ರೆಸ್‌ ಕಾರ್ಯಕರ್ತರಿಗೆ ಹಣ ನೀಡುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸಲಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾಯಿತ ಶಾಸಕರು ಇರುತ್ತಾರೆ. ಅವರ ಮೇಲೆ ಒಬ್ಬ ಕಾಂಗ್ರೆಸ್‌ ಕಾರ್ಯಕರ್ತನನ್ನು ನೇಮಿಸಿ, ಆತನಿಂದ ನ್ಯಾಯಬೆಲೆ ಅಂಗಡಿಯಲ್ಲಿ ದರ ನಿಗದಿ ಮಾಡಿಸಲಾಗುತ್ತಿದೆ. ಇಲ್ಲಿಂದಲೇ ಅಕ್ರಮ ಆರಂಭವಾಗುತ್ತದೆ. ಸಂವಿಧಾನ ಉಳಿಸಿ, ಸರ್ಕಾರದ ಹಣ ರಕ್ಷಿಸಿ ಎಂದು ಆಗ್ರಹಿಸಿ ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ಮಾಡಲಾಗುವುದು. ಜೊತೆಗೆ ಅಧಿವೇಶನದಲ್ಲೂ ಧರಣಿ ಮಾಡಲಾಗುವುದು ಎಂದು ತಿಳಿಸಿದರು.  

ಇದನ್ನೂ ಓದಿ:  ಅರ್ಧ ತುಂಡು ಟೊಮೆಟೋಗೆ ಈ ವಸ್ತು ಬೆರೆಸಿ ಹಚ್ಚಿದ್ರೆ ಮೂರೇ ನಿಮಿಷದಲ್ಲಿ ಕಪ್ಪಾಗುತ್ತೆ ಬಿಳಿ ಕೂದಲು!

ಸಮಿತಿ ನೇಮಕ ಮಾಡಿ ನ್ಯಾಯಬೆಲೆ ಅಂಗಡಿಗಳ ಸಭೆ ನಡೆಸಲಾಗಿದೆ. ಆಗಲೇ ಇದು ಅಕ್ರಮ ಎಂದು ಗೊತ್ತಾಗಿದೆ. ಕಾಂಗ್ರೆಸ್‌ ಶಾಸಕರಿಗೂ ಇದು ಇಷ್ಟವಾಗಿಲ್ಲ. ಟಿಕೆಟ್‌ ನೀಡಿಲ್ಲದವರಿಗೆ ಈ ಅವಕಾಶ ನೀಡಲಾಗಿದೆ. ಅಂಬೇಡ್ಕರ್‌ ವಸತಿ ಯೋಜನೆ, ಆಶ್ರಯ, ಬಗರ್‌ಹುಕುಂ ಸಾಗುವಳಿ ಯೋಜನೆ ಮೊದಲಾದ ಸಮಿತಿಗಳಿಗೆ ಶಾಸಕರೇ ಅಧ್ಯಕ್ಷರಾಗಿರುತ್ತಾರೆ. ಅದೇ ರೀತಿ ಇದನ್ನೂ ಮಾಡಬೇಕು. ಇದು ಸಂವಿಧಾನ ವಿರೋಧಿಯಾಗಿದೆ. ಶಾಸಕರ ಅಧಿಕಾರವನ್ನು ಮೊಟಕು ಮಾಡುವುದು ಸರಿಯಲ್ಲ ಎಂದು ಖಂಡಿಸಿದರು

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News