ಬೆಳಗಾವಿ: ಲೋಕಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸದೆ ಇಂಗ್ಲಿಷ್‌ನಲ್ಲಿ ಸ್ವೀಕರಿಸಿದ ಕೇಂದ್ರ ಸಚಿವ ಸುರೇಶ್ ಅಂಗಡಿ ವಿರುದ್ಧ ಬುಧವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


COMMERCIAL BREAK
SCROLL TO CONTINUE READING

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಧರಣಿ ನಡೆಸಿದ ಕರವೇ ಕಾರ್ಯಕರ್ತರು ಅಂಗಡಿಯವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಸುರೇಶ್ ಅಂಗಡಿ ಅವರು ಕೂಡಲೇ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.


ಕರ್ನಾಟಕದ 28 ರ ಪೈಕಿ ಡಿ.ವಿ.ಸದಾನಂದ ಗೌಡ, ಸುಮಲತಾ ಸೇರಿದಂತೆ 25 ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಮತ್ತೋರ್ವ ಸಂಸದರು ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆದರೆ ಸುರೇಶ ಅಂಗಡಿ ಅವರು ಮಾತ್ರ ಇಂಗ್ಲೀಷಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗೈರು ಹಾಜರಾಗಿದ್ದರು.