ಸದನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ ಬಿಜೆಪಿ ಶಾಸಕರು
ವಿಧಾನಸಭೆ ಅಧಿವೇಶನಕ್ಕೂ ಮುನ್ನ ಜಂಟಿ ಸಧನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು: ವಿಧಾನಸಭೆ ಅಧಿವೇಶನಕ್ಕೂ ಮುನ್ನ ಜಂಟಿ ಸಧನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಶಾಸಕರು ಘೋಷಣೆ ಕೂಗುತ್ತಾ ಸದನದ ಬಾವಿಗೆ ಬಂದಾಗ ರಾಜ್ಯಪಾಲ ವಾಜುಬಾಯಿ ವಾಲಾ ಪೂರ್ಣ ಭಾಷಣವನ್ನು ಓದದೆ 22 ಪುಟಗಳ ಪೈಕಿ ಕೇವಲ 2 ಪುಟಗಳನ್ನು ಮಾತ್ರ ಓದಿದರು.ಈ ಹಿಂದೆ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಹೇಳಿದ್ದ ಯಡ್ಡಿಯೂರಪ್ಪ ಮಾತ್ರ ಇಂದು ತಮ್ಮ ಸದಸ್ಯರ ಜೊತೆಗೆ ಪ್ರತಿಭಟನೆಗೆ ಸಾಥ್ ನೀಡಿದರು.
ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರ್ಕಾರಕ್ಕೆ ಬಿಜೆಪಿ ಸದಸ್ಯರು ಬಜೆಟ್ ಅಧಿವೇಶನಕ್ಕೆ ಅಡ್ಡಿ ಮಾಡಲಿದ್ದಾರೆ ಎನ್ನುವ ಆತಂಕ ಇತ್ತು ಆದರೆ ಅವರು ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಮಾಡುವ ನಿರೀಕ್ಷೆ ಯಾವುದು ಇರಲಿಲ್ಲ.ರಾಜ್ಯಪಾಲರು ಭಾಷಣ ಆರಂಭಿಸುತ್ತಿದ್ದಂತೆ ಸದನದ ಭಾವಿಗಿಳಿದಾಗ ಆಡಳಿತ ಪಕ್ಷದ ಸದಸ್ಯರು ಒಂದು ಕ್ಷಣ ವಿಚಲಿತರಾಗಿದ್ದು ಕಂಡು ಬಂತು.