ಬೆಂಗಳೂರು: ಹೈಕೋರ್ಟ್ ಆದೇಶದ ಹಿನ್ನೆಲೆ ಪಿಎಸ್‍ಐ ಮರು ಪರೀಕ್ಷಾ ದಿನಾಂಕವನ್ನು ಮುಂದೂಡುವಂತೆ ಆಗ್ರಹಿಸಿ ಅಭ್ಯರ್ಥಿಗಳು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಜನತಾ ದರ್ಶನಕ್ಕೆ ಆಗಮಿಸಿದ್ದ ಪಿಎಸ್‍ಐ ಅಭ್ಯರ್ಥಿಗಳು ಕಚೇರಿ ಮುಂಭಾಗ ಪ್ರತಿಭಟನೆಗೆ ಮುಂದಾದರು. ಈ ವೇಳೆ ಪ್ರತಿಭಟನೆಗೆ ಅವಕಾಶ ಕೊಡದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.  


COMMERCIAL BREAK
SCROLL TO CONTINUE READING

ತಮ್ಮ ಕಷ್ಟ ಹೇಳಿಕೊಂಡ ಬಂದ ಪಿಎಸ್‍ಐ ಅಭ್ಯರ್ಥಿಗಳನ್ನು ಬಂಧಿಸಿರುವ ಪೊಲೀಸರ ಕ್ರಮವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘545 ಪೊಲೀಸ್ ಸಬ್ ಇನ್ಸ್'ಪೆಕ್ಟರ್ ಹುದ್ದೆಗಳ ಮರುಪರೀಕ್ಷೆಗೆ ಅತ್ಯಂತ ಕಡಿಮೆ ಕಾಲಾವಕಾಶವನ್ನು ನಿಗದಿಪಡಿಸಿರುವ ಸರ್ಕಾರದ ಅವೈಜ್ಞಾನಿಕ ನಿರ್ಧಾರವನ್ನು ಪ್ರತಿಭಟಿಸಿ, ಪರೀಕ್ಷಾ ದಿನಾಂಕವನ್ನು ಮುಂದೂಡಿ ಸಮಯ ವಿಸ್ತರಿಸುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಲು ಮುಖ್ಯಮಂತ್ರಿಗಳ ಬಳಿಗೆ ತೆರಳಿದ್ದ ಪರೀಕ್ಷಾರ್ಥಿ ನಿರುದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಂಡು ಪೊಲೀಸ್ ಬಂಧನಕ್ಕೆ ಒಳಪಡಿಸಿರುವುದು ಅತ್ಯಂತ ಖಂಡನೀಯ ಕ್ರಮವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಜ್ಯದಲ್ಲಿ ಸಿಎಂ, ಡಿಸಿಎಂ, ಅಧಿಕಾರ ಹಂಚಿಕೆ ವಿಚಾರ


‘ಪರೀಕ್ಷಾ ಹಗರಣದಿಂದ ಈ ಮೊದಲೇ ಹೈರಾಣಾಗಿ ಹೋಗಿದ್ದ ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಮನವಿ ಅತ್ಯಂತ ನ್ಯಾಯ ಸಮ್ಮತವಾಗಿದ್ದು, ಇದನ್ನು ಮುಖ್ಯಮಂತ್ರಿಗಳು ಸಹಾನುಭೂತಿಯಿಂದ ಪರಿಶೀಲಿಸಬೇಕಿತ್ತು. ಆದರೆ ಪೊಲೀಸರನ್ನು ಬಿಟ್ಟು ಬಂಧಿಸಿದ ಕ್ರಮ ಕಾಂಗ್ರೆಸ್ ಸರ್ಕಾರಕ್ಕೆ, ಅಮಾಯಕ ನಿರುದ್ಯೋಗಿಗಳ ಮೇಲೆ ಇರುವ ತಾತ್ಸಾರ ಧೋರಣೆಯನ್ನು ಪ್ರತಿಬಿಂಬಿಸಿದೆ’ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.


ಪಿಎಸ್ಐ ಹುದ್ದೆ ಆಕಾಂಕ್ಷಿಗಳ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸರ್ಕಾರ ಈ ಕೂಡಲೇ ಪರೀಕ್ಷೆಯನ್ನು ಮುಂದೂಡಿ ಸೂಕ್ತ ಕಾಲಾವಕಾಶ ನೀಡಬೇಕೆಂದು ಒತ್ತಾಯಿಸುತ್ತೇನೆ. ಪಿಎಸ್ಐ ಹುದ್ದೆ ಪರೀಕ್ಷಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಬಿಜೆಪಿ ಬೆಂಬಲಿಸುತ್ತದೆ’ ಎಂದು ಅಭ್ಯರ್ಥಿಗಳಿಗೆ ವಿಜಯೇಂದ್ರ ಧೈರ್ಯ ತುಂಬಿದ್ದಾರೆ.


ಇದನ್ನೂ ಓದಿ: ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಜನಸ್ಪಂದನ ಕಾರ್ಯಕ್ರಮ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.