PSI Recruitment scam : ಪಿಎಸ್ಐ ನೇಮಕಾತಿ ಪ್ರಕರಣ : ಕೋರ್ಟ್ಗೆ 3065 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ
ಪಿಎಸ್ಐ ಅಕ್ರಮ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಇಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಇಂದು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಐಡಿ 3065 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದೆ. 202 ವಿಟ್ನೆಸ್ ಗಳು, 330 ದಾಖಲಾತಿಗಳು, 30 ಜನ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಎಡಿಜಿಪಿ ಅಮೃತ್ ಪೌಲ್ ಸೇರಿದಂತೆ ಕೆಲ ಆರೋಪಿಗಳನ್ನು ಬಿಟ್ಟು ಉಳಿದ ಅರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಅಮ್ರಿತ್ ಪೌಲ್ ಮೇಲೆ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲು ಸಾಕಷ್ಟು ಕಾಲವಾಕಾಶ ಇದೆ.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ, 3 ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿ!
ಹೀಗಾಗಿ ಹೆಚ್ಚಿನ ಮಾಹಿತಿಯನ್ನ ಸಿಐಡಿ ಕಲೆ ಹಾಕ್ತಿದೆ. ಸದ್ಯ ಸಂಪೂರ್ಣ ತನಿಖೆ ಮುಗಿದವರ ವಿರುದ್ಧ ಮಾತ್ರ ಈಗ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಎಫ್ಐಆರ್ ನಲ್ಲಿ ಹೆಸರಿದ್ದು, ಅರೆಸ್ಟ್ ಆಗದೆ ಇರುವ ಅರೋಪಿಗಳು ಹಾಗೂ ಕೊನೆ ಹಂತದಲ್ಲಿ ಅರೆಸ್ಟ್ ಅಗಿರುವ ಅರೋಪಿಗಳ ವಿರುದ್ದ ಚಾರ್ಜ್ ಶೀಟ್ ನಲ್ಲಿ ಸೇರಿಸಿಲ್ಲ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.