ಬೆಂಗಳೂರು : ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆಪಾದನೆ ಕುರಿತು, ತನಿಖೆ ನಡೆಸುತ್ತಿರುವ ರಾಜ್ಯ ಸಿಐಡಿ ಪೊಲೀಸರು, ಇಂದು, ಮಹತ್ವದ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಶಾಸಕ ರೊಬ್ಬರ ಗನ್ ಮ್ಯಾನ್ ಒಬ್ಬರನ್ನು ಬಂಧಿಸಿದ್ದಾರೆ.
ಸಧ್ಯ ಸಿಐಡಿ ಪೊಲೀಸರು, ತನಿಖೆಯನ್ನು ಚುರುಕುಗೊಳಿಸಿದ್ದು, ಅಕ್ರಮ ದಲ್ಲಿ ಭಾಗವಹಿಸಿದ್ದ ಎಲ್ಲಾ ತಪ್ಪಿತಸ್ಥರನ್ನು ಬಂಧಿಸಿ, ಕಾನೂನಿನ ಕ್ರಮಕ್ಕೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Dingaleshwar Swamiji : ಸಚಿವ ಸಿಸಿ ಪಾಟೀಲ್ ವಿರುದ್ಧ ಕಿಡಿಕಾರಿದ ದಿಂಗಾಲೇಶ್ವರ ಶ್ರೀಗಳು
ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ, ನ್ಯಾಯ ಒದಗಿಸಲು, ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ತನಿಖೆಯು ನಿಷ್ಪಕ್ಷಪಾತವಾಗಿ, ನಡೆಯುತ್ತಿದ್ದು, ಅಕ್ರಮದಲ್ಲಿ ಒಳಗಾಗಿದವರು, ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದು ತನಿಖಾ ತಂಡ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.