ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ? ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪಿಎಸ್‍ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ಎನ್ನಲಾದ ದಿವ್ಯಾ ಹಾಗರಗಿ ಮಾತನಾಡುತ್ತಿರುವ ಫೋಟೋವನ್ನು ಬಿಜೆಪಿ ಹಂಚಿಕೊಂಡಿದೆ. ಈ ಫೋಟೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖರ್ ವೈರಲ್ ಆಗುತ್ತಿದೆ. ‘ಪ್ರಿಯಾಂಕ್ ಖರ್ಗೆಯವರೇ ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ. ಆದರೆ ಇಲ್ಲಿ ನೋಡಿ..!!! ಈ ಚಿತ್ರ ಏನು ಹೇಳುತ್ತದೆ? ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ! ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ?’ ಅಂತಾ ಟೀಕಿಸಿದೆ.
ಪ್ರಿಯಾಂಕ ಖರ್ಗೆಯವರೇ, ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಅವರ ಜೊತೆಯಿದೆ ಎಂದು ಆಪಾದಿಸಿದ್ದೀರಿ.
ಆದರೆ ಇಲ್ಲಿ ನೋಡಿ..!!! ಈ ಚಿತ್ರ ಏನು ಹೇಳುತ್ತದೆ?
ಎಷ್ಟೊಂದು ತನ್ಮಯತೆಯಿಂದ ಮಾತನಾಡುತ್ತಿದ್ದಾರೆ!
ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ-ಬಾದಾಮಿ ತಿಂದಿರಬಹುದು ಎಂದು ವಿವರಿಸಬಹುದೇ?#CONgressPSIToolkit pic.twitter.com/qnEPtdjRa6
— BJP Karnataka (@BJP4Karnataka) April 26, 2022
ಇದನ್ನೂ ಓದಿ: PSI Scam: ‘ತನಿಖಾಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ ಈಗ ಸೊಬಗನಂತೆ ವರ್ತಿಸುತ್ತಿದ್ದಾರೆ’
‘ಸಿಡಿ ವಿವಾದ, ಹಿಜಾಬ್ ಸಂಘರ್ಷ, 40% ಪರ್ಸೆಂಟ್ ಕಮಿಷನ್, ಹರ್ಷ ಕೊಲೆ, ಹುಬ್ಬಳ್ಳಿ ಗಲಭೆ ಮತ್ತು ಪಿಎಸ್ಐ ನೇಮಕ ಹಗರಣ ಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಡಿ.ಕೆ.ಶಿವಕುಮಾರ್ ಅವರೇ ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
√ ಸಿಡಿ ವಿವಾದ
√ ಹಿಜಾಬ್ ಸಂಘರ್ಷ
√ 40% ಪರ್ಸೆಂಟ್ ಕಮಿಷನ್
√ ಹರ್ಷ ಕೊಲೆ
√ ಹುಬ್ಬಳ್ಳಿ ಗಲಭೆ
√ ಪಿಎಸ್ಐ ನೇಮಕ ಹಗರಣಎಲ್ಲದಕ್ಕೂ ಸೂತ್ರಧಾರ ಒಬ್ಬರೇ. ಮಾನ್ಯ @DKShivakumar ಅವರೇ,
ನೀವೆಷ್ಟೇ ರಹಸ್ಯ ಕಾರ್ಯಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ?#CONgressPSIToolkit
— BJP Karnataka (@BJP4Karnataka) April 26, 2022
‘ಪಿಎಸ್ಐ ನೇಮಕ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ ಪ್ರಿಯಾಂಕ್ ಖರ್ಗೆಯವರೇ ನೀವು ಈ ಮಹತ್ವದ ದಾಖಲೆಯನ್ನು ಮುಚ್ಚಿಟ್ಟಿದ್ದೇಕೆ? ನಿಮ್ಮ ಪಕ್ಷದ ನಾಯಕರ ಹುಳುಕು ಬಯಲಾಗುತ್ತದೆ ಎಂಬ ಭಯವೇ? ಇದೇ ಕಾರಣಕ್ಕಾಗಿ ನೀವು ಸಿಐಡಿ ವಿಚಾರಣೆ ತಪ್ಪಿಸಿಕೊಂಡಿದ್ದೇ? ಅಥವಾ ಹಗರಣದಲ್ಲಿ ನಿಮ್ಮದೂ ಪಾಲಿದೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ‘ಪರ್ಸೆಂಟೇಜ್ ಪಿತಾಮಹʼ: ಬಿಜೆಪಿ ಆರೋಪ
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ @DKShivakumar ಅವರು ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರ್ಯಕ್ಕೂ ಈಗ ದಾಖಲೆ ಲಭಿಸುತ್ತಿದೆ.
ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡ!#CONgressPSIToolkit
— BJP Karnataka (@BJP4Karnataka) April 26, 2022
ಪಿಎಸ್ಐ ನೇಮಕ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ @PriyankKharge ಅವರೇ,
ನೀವು ಈ ಮಹತ್ವದ ದಾಖಲೆಯನ್ನು ಮುಚ್ಚಿಟ್ಟಿದ್ದೇಕೆ?
ನಿಮ್ಮ ಪಕ್ಷದ ನಾಯಕರ ಹುಳುಕು ಬಯಲಾಗುತ್ತದೆ ಎಂಬ ಭಯವೇ?
ಇದೇ ಕಾರಣಕ್ಕಾಗಿ ನೀವು ಸಿಐಡಿ ವಿಚಾರಣೆ ತಪ್ಪಿಸಿಕೊಂಡಿದ್ದೇ?
ಅಥವಾ ಹಗರಣದಲ್ಲಿ ನಿಮ್ಮದೂ ಪಾಲಿದೆಯೇ?#CONgressPSIToolkit
— BJP Karnataka (@BJP4Karnataka) April 26, 2022
‘ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರ್ಯಕ್ಕೂ ಈಗ ದಾಖಲೆ ಲಭಿಸುತ್ತಿದೆ. ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡ! ಪ್ರಿಯಾಂಕ್ ಖರ್ಗೆ ಜೊತೆ ನಾವಿದ್ದೇವೆಂದು ಕೆಪಿಸಿಸಿ ಭ್ರಷ್ಟಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇಕೆ ಎಂದು ಈಗ ಬಯಲಾಗುತ್ತಿದೆ. ಹಗರಣದ ನಿರ್ಮಾಣ, ನಿರ್ದೇಶನ, ಚಿತ್ರಕತೆ, ಸಂಭಾಷಣೆ ಎಲ್ಲವೂ ಸಿದ್ಧವಾಗಿದ್ದು ಕೆಪಿಸಿಸಿ ಕಚೇರಿಯಲ್ಲೇ?’ ಎಂದು ಬಿಜೆಪಿ ಟೀಕಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.