ಬೆಂಗಳೂರು: 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ADGP ದರ್ಜೆಯ ಅಧಿಕಾರಿ ಅಮೃತ್ ಪೌಲ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಅಮೃತ್ ಪೌಲ್ ಅವರ ಆಫೀಸಿನಲ್ಲೇ OMR ಶೀಟ್ ತಿದ್ದುಪಡಿ ಮಾಡಲಾಗಿದೆ ಎಂಬ ಗಂಭೀರ ಆರೋಪವಿದೆ.


COMMERCIAL BREAK
SCROLL TO CONTINUE READING

ಸಿಐಡಿ ಅಧಿಕಾರಿಗಳು ಅಮೃತ್ ಪೌಲ್ ಅವರನ್ನು ಸೋಮವಾರ(ಜುಲೈ 4)ವಿಚಾರಣೆ ನಡೆಸಿ ಬಂಧಿಸಿದ್ದಾರೆ‌. 545 ಹುದ್ದೆಗಳಿಗೆ ಪಿಎಸ್‍ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಅಮೃತ್ ಪೌಲ್ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಜೊತೆಗೆ ಪೌಲ್ ಪರವಾಗಿ DySP ಶಾಂತಕುಮಾರ್ ಹಣ ವಸೂಲಿ ಆರೋಪವೂ ಕೇಳಿ ಬಂದಿತ್ತು. ಈಗಾಗಲೇ DySP ಶಾಂತಕುಮಾರ್‍ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ವಿಚಾರಣೆ ಸಹ ನಡೆಸುತ್ತಿದ್ದಾರೆ.


ಇದನ್ನೂ ಓದಿ: PSI Recruitment Scam: ಗೃಹಸಚಿವ ಆರಗ ಜ್ಞಾನೇಂದ್ರಗೆ 8 ಎಂಎಲ್ಎಗಳಿಂದ ಪತ್ರ


ಶಾಂತಕುಮಾರ್ ನೀಡಿದ ಮಾಹಿತಿ ಮೇರೆಗೆ ಅಮೃತ್ ಪೌಲ್‍ರನ್ನು ಅರೆಸ್ಟ್ ಮಾಡಲಾಗಿದೆ. ಪೌಲ್ 25 ಅಭ್ಯರ್ಥಿಗಳಿಂದ ತಲಾ 30 ಲಕ್ಷ ರೂ. ಪಡೆದಿದ್ದರು. ಈ ಹಣವನ್ನು ಸಿಐಡಿ ಅಧಿಕಾರಿಗಳು ಈಗಾಗಲೇ ಸೀಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.


ಇನ್ನೂ ಅಮೃತ್ ಪೌಲ್ ಆಫೀಸ್​​ನಲ್ಲೇ OMR ಶೀಟ್ ತಿದ್ದುಪಡಿ ನಡೆದಿತ್ತು ಎಂಬುದು ವಿಚಾರಣೆ ವೇಳೆ ತಿಳಿದು ಬಂದಿದೆ. ಈ ಬಗ್ಗೆಯೂ ಸಿಐಡಿ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದು, ತನಿಖೆ ಮುಂದುವರೆಸಿದ್ದಾರೆ.


 ಇದನ್ನೂ ಓದಿ: Mandya : ಮಗನಿಗೆ ಪಿಎಸ್ಐ ಕೆಲಸ ಕೊಡಿಸಲು ಹೋಗಿ 30 ಲಕ್ಷ ಕಳೆದು ಕೊಂಡ ರೈತ!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ