PSI Recruitment Scam: ಸಿಎಂ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ
ಈ ಹಿಂದಿನ ಎಫ್ಡಿಎ, ತೋಟಗಾರಿಕೆ, ಪಶು ಸಂಗೋಪನೆ, ಲೋಕೋಪಯೋಗಿ ಹಾಗೂ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯೂ ನ್ಯಾಯಬದ್ಧವಾಗಿ, ಕ್ರಮಬದ್ಧವಾಗಿ ನಡೆದಿಲ್ಲವೆಂಬ ಆರೋಪವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣದಲ್ಲಿ ಸಚಿವರು, ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಇಡೀ ಹಗರಣದ ಬಗ್ಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.
‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮಗ ವಿಜಯೇಂದ್ರ ಹಾಗೂ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪಗಳು ಕೇಳಿಬಂದಿದೆ. ಅಶ್ವತ್ಥ್ ನಾರಾಯಣ್ ಸಂಬಂಧಿಕರು ಮಾರ್ಕ್ಸ್ ತಿದ್ದಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಿದ್ದಾಗ ಸಿಐಡಿ ತನಿಖೆಯಿಂದ ಯಾವ ನ್ಯಾಯ ಸಿಗಲು ಸಾಧ್ಯ?’ ಎಂದು ಪ್ರಶ್ನಿಸಿದ್ದಾರೆ.
PSI Recruitment Scam: ಅಮೃತ್ ಪೌಲ್ ಆಫೀಸ್‌ನಲ್ಲೇ OMR ಶೀಟ್ ತಿದ್ದುಪಡಿ..?
ವಾಸ್ತು ಜೋತಿಷ್ಯದಿಂದ ನೊಂದವರಿಂದಲೇ ಚಂದ್ರಶೇಖರ್ ಗುರೂಜಿ ಹತ್ಯೆ?
ಸಿದ್ದರಾಮಯ್ಯ ಕುಟುಕಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ