PSI Recruitment Scam: ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಸಿದ್ದರಾಮಯ್ಯ ಆಗ್ರಹ

ಅಮೃತ್ ಪೌಲ್ ಬರೆದ ಡೈರಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Written by - Puttaraj K Alur | Last Updated : Jul 14, 2022, 05:34 PM IST
  • ಅಮೃತ್ ಪೌಲ್ ಮಂಪರು ಪರೀಕ್ಷೆಗೊಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಶಾಮೀಲಾಗಿದ್ದಾರೆಂಬುದು ಗೊತ್ತಾಗಲಿದೆ
  • ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ
  • ಅಮೃತ್ ಪೌಲ್ ಬರೆದ ಡೈರಿ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ
PSI Recruitment Scam: ಅಮೃತ್ ಪೌಲ್ ಮಂಪರು ಪರೀಕ್ಷೆಗೆ ಸಿದ್ದರಾಮಯ್ಯ ಆಗ್ರಹ  title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ

ಬೆಂಗಳೂರು: 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ಹಿಂದಿನ ಎಡಿಜಿಪಿ ಅಮೃತ್ ಪೌಲ್‍ರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಅವರು, ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸಿಐಡಿ ಅಧಿಕಾರಿಗಳಿಂದ ಬಂಧಿತರಾಗಿರುವ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಯಾರೆಲ್ಲ ರಾಜಕಾರಣಿಗಳು ಇರದಲ್ಲಿ ಶಾಮೀಲಾಗಿದ್ದಾರೆ ಎಂಬುದು ಗೊತ್ತಾಗಲಿದೆ. "ಉಪ್ಪು ತಿಂದವರು ನೀರು ಕುಡಿಯಲಿ" ಎಂದು ಹೇಳಿದ್ದಾರೆ.

ಇದನ್ನೂ ಓದಿ: Lakshmi Hebbalkar : ಬಿಎಸ್​ವೈ ಭೇಟಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್!

‘ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಅನೇಕ ಸಚಿವರು, ಅವರ ಆಪ್ತರು ಶಾಮೀಲಾಗಿರುವ ಸಂದೇಹಗಳಿವೆ. ಈ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಬೇಕು ಎಂದರೆ ಪ್ರಮುಖ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಮತ್ತು ಅಮೃತ್ ಪೌಲ್ ಬರೆದ ಡೈರಿಯ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಕಾಂಗ್ರೆಸ್​ ಸರ್ಕಾರದಲ್ಲಿ ನಡೆದ ಹಲವು ಅಕ್ರಮದ ಬಗ್ಗೆ ಸಚಿವ.ಡಾ.ಅಶ್ವತ್ಥ್ ನಾರಾಯಣ್ ಆರೋಪಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ‘ಆಗ ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದರು. ಆಗಲೇ ಪ್ರಶ್ನಿಸಬೇಕಿತ್ತಲ್ಲ. ಆಗ ಬಾಯಲ್ಲಿ ಕಡುಬು ತುರುಕಿಕೊಂಡಿದ್ದರೇ’ ಎಂದು ಕಿಡಿಕಾರಿದರು.

ಇದನ್ನೂ ಓದಿ: Priyank Kharge : ವಿಧಾನ ಸೌಧ ವ್ಯಾಪಾರ ಸೌಧ ಆಗಿದೆ : ಪ್ರಿಯಾಂಕ್ ಖರ್ಗೆ

ಸಾವಿರಾರು ಅಭಿಮಾನಿಗಳು ನನ್ನ ಜನ್ಮದಿನದ ಅಮೃತ ಮಹೋತ್ಸವ ಆಯೋಜಿಸಿದ್ದಾರೆ. ಇದು ಬಿಜೆಪಿಯವರಲ್ಲಿ ನಡುಕ ಹುಟ್ಟಿಸಿದೆ. ಹೀಗಾಗಿ ಅವರು ಹತಾಶೆಯಿಂದ ಮಾತನಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದಕ್ಕೆ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ, ರಾಜ್ಯದ ಬಿಜೆಪಿ ಸರ್ಕಾರ ಇದನ್ನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ. ಎಷ್ಟು ಜನ ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮೇಲ್ವಿಚಾರಣೆ ನಡೆಸುತ್ತಿದ್ದಾರೆ? ಎಂದು ಇದೇ ವೇಳೆ ಅವರು ಪ್ರಶ್ನಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News