PSI Recruitment Scam: ‘ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ’

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Written by - Puttaraj K Alur | Last Updated : Jul 4, 2022, 06:01 PM IST
  • ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ
  • PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ
  • ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ
PSI Recruitment Scam: ‘ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ’ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

‘ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರಗಳು ಹೊರಗೆ ಬೀಳುತ್ತಿವೆ. PSI ನೇಮಕಾತಿ ಹಗರಣದಲ್ಲಿ ADGP ಅಮೃತಪೌಲ್ ಬಂಧನವೇ ಇದಕ್ಕೆ ಸಾಕ್ಷಿ. ಹಗರಣವೇ ನಡೆದಿಲ್ಲ ಎಂದು ಮೈಮೇಲೆ ಬರುತ್ತಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಈಗ ಏನು ಹೇಳುತ್ತಾರೆ?’ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಡಿಎದಲ್ಲಿ ಮತ್ತೊಂದು ಭಾರೀ ಹಗರಣ ಬೆಳಕಿಗೆ

‘PSI ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮೊದಲು ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ಕಿತ್ತುಹಾಕಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸಾಂಸ್ಕೃತಿಕ ಭಯೋತ್ಪಾದನೆ

ಶಿವಮೊಗ್ಗದ ಅನವಟ್ಟಿಯಲ್ಲಿ ಆಯೋಜಿಸಿದ್ದ ‘ಜತೆಗಿರುವನು ಚಂದಿರ’ ನಾಟಕಕ್ಕೆ ಬಜರಂಗದಳ ಮತ್ತು ಆರ್‍ಎಸ್‍ಎಸ್‍ ಅಡ್ಡಿಪಡಿಸಿದ ವಿಚಾರ ಸಂಬಂಧ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಇದು ‘ಸಾಂಸ್ಕೃತಿಕ ಭಯೋತ್ಪಾದನೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈದ್ಗಾ ಮೈದಾನ ಭೂ ವಿವಾದ: ಜುಲೈ 12ಕ್ಕೆ ಚಾಮರಾಜಪೇಟೆ ಸಂಪೂರ್ಣ ಬಂದ್

‘ಶಿವಮೊಗ್ಗದ ಅನವಟ್ಟಿಯಲ್ಲಿ ಕನ್ನಡ ನಾಟಕ 'ಜತೆಗಿರುವನು ಚಂದಿರ' ಪ್ರದರ್ಶನಕ್ಕೆ ಆರ್‌ಎಸ್‌ಎಸ್ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ. ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಸರ್ಕಾರ ಈ ಕೂಡಲೇ ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ,‌ ನಾಟಕ ಕಲೆ‌ ಮೊದಲಾದ‌‌‌ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರ್‌ಎಸ್‌ಎಸ್ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ-ಆತಂಕಗಳನ್ನು ಎದುರಿಸುವ ಚೈತನ್ಯ‌ ಕನ್ನಡದ ಸಾಂಸ್ಕೃತಿಕ‌ ಲೋಕಕ್ಕೆ ಇದೆ’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News