ಬೆಂಗಳೂರು: ನೇಮಕಾತಿ ಅಕ್ರಮದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ವಿಚಾರಗಳು ಹೊರಬೀಳುತ್ತಿವೆ. ಅಕ್ರಮದಲ್ಲಿ‌ ಭಾಗಿಯಾದವರ ಬಂಧನಕ್ಕೆ ಸೂಚನೆ‌ ನೀಡಲಾಗಿದೆ. ಎಷ್ಟೇ ಪ್ರಭಾವಿಯಾಗಿದ್ದರೂ, ಎಷ್ಟೇ ಚಾಣಾಕ್ಷನಾಗಿದ್ದರೂ ನಾವು ಹೆಡೆಮುರಿಕಟ್ಟುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

‘ಪಿಎಸ್‌ಐ ಪರೀಕ್ಷೆ ಅಕ್ರಮದ ಕುರಿತಾಗಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್‌ ಖರ್ಗೆ ಸುದ್ದಿಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ ಆಡಿಯೋ ಬಗ್ಗೆಯೂ ತನಿಖೆ ಆಗಲಿದೆ. ಎಲ್ಲಾ ಆಯಾಮದಲ್ಲೂ ತನಿಖೆ ಆಗಲಿದೆ. ಯಾರೇ ತಪ್ಪಿತಸ್ಥರು ಇದ್ದರೂ ಕ್ರಮ ಕೈಗೊಳ್ಳುತ್ತೇವೆ’ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ಉಲ್ಲೇಖಿಸಿ ಬಿಜೆಪಿ ಟ್ವೀಟ್ ಮಾಡಿದೆ.


ಕಿಡ್ನಿ ಕೊಟ್ರೆ 4 ಕೋಟಿ ರೂ. ಕೊಡ್ತೀವಿ: ನಕಲಿ ವೆಬ್‌ಸೈಟ್ ಮೂಲಕ ವಂಚಿಸಿದ್ದ ಮೂವರು ವಿದೇಶಿ ಪ್ರಜೆಗಳ ಬಂಧನ


ಪಿಎಸ್‍ಐ ಅಕ್ರಮದ ಆಡಿಯೋ ಬಿಡುಗಡೆ ಮಾಡಿದ್ದ ಪ್ರಿಯಾಂಕಾ ಖರ್ಗೆಗೆ ಸಿಐಡಿ ನೋಟಿಸ್ ನೀಡಿರುವುದನ್ನು ಪ್ರಶ್ನಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಬಿಜೆಪಿ ತಿರುಗೇಟು ನೀಡಿದೆ. ‘ಮಹಾಂತೇಶ್ ಪಾಟೀಲ್ ಹಾಗೂ ಅವರ ಸೋದರ ಆರ್.ಡಿ.ಪಾಟೀಲ್ ಖರ್ಗೆ ಕುಟುಂಬ ಹಾಗೂ ಕಾಂಗ್ರೆಸ್ ಜೊತೆಗೆ ಹೊಂದಿರುವ ಸಾಂಗತ್ಯದ ಬಗ್ಗೆ ಡಿ.ಕೆ.ಶಿವಕುಮಾರ್ ಅವರು ಏಕೆ ಮೌನವಾಗಿದ್ದಾರೆ? ಪ್ರಿಯಾಂಕ್ ಖರ್ಗೆ ಹೇಳುತ್ತಿರುವ ದಿನಕ್ಕೊಂದು ಸುಳ್ಳು ಅಟೆನ್ಷನ್ ಡೈವರ್ಶನ್ ಮಾಡುವ ತಂತ್ರವಷ್ಟೇ’ ಅಂತಾ ಟೀಕಿಸಿದೆ.


ಕೊರೊನಾ 4ನೇ ಅಲೆ ಆತಂಕ.. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತು ವಿಶೇಷ ಸಭೆ


ಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿರುವ ಬಿಜೆಪಿ, ‘ಮಾಧ್ಯಮದವರ ಮುಂದೆ ಪತ್ರಿಕಾಗೋಷ್ಠಿ ನಡೆಸುವಾಗ ತನಿಖಾ ಅಧಿಕಾರಿಯಂತೆ ವರ್ತಿಸಿದ ಪ್ರಿಯಾಂಕ್ ಖರ್ಗೆ ಇದೀಗ ಪೊಲೀಸರು ತನಿಖೆಗೆ ಸಹಕರಿಸುವಂತೆ ಕೇಳಿದಾಗ ಬೆಚ್ಚಿ ಬಿದ್ದಿದ್ದಾರೆ. ಮಾಧ್ಯಮದ ಮುಂದೆ ಹೋಗುವಾಗಿದ್ದ ಸಾಕ್ಷ್ಯ, ಆಡಿಯೋ ಟೇಪ್‌ ಈಗೇನಾಗಿದೆ? ನೇಮಕಾತಿ ಹಗರಣದ ತನಿಖೆ ಚುರುಕಾಗುತ್ತಿರುವಂತೆ ನಿಮ್ಮ ನೆಲ ಅಲುಗಾಡಿತೇ?’ ಎಂದು ವ್ಯಂಗ್ಯವಾಡಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.