ಸಂಕ್ರಾಂತಿ ನಂತರ PU-ಡಿಗ್ರಿ ವಿದ್ಯಾರ್ಥಿಗಳಿಗೂ 'ಆಫ್‌ ಲೈನ್ ಕ್ಲಾಸ್' ಶುರು..!

ಕೊರೊನಾ ಕಾರಣಕ್ಕೆ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ - ಕಾಲೇಜುಗಳು ಹಂತಹಂತವಾಗಿ ಆರಂಭವಾಗುತ್ತಿವೆ. ಈಗಾಗಲೇ 10 ಹಾಗೂ 12 ನೇ ತರಗತಿ ಜೊತೆಗೆ ವಿದ್ಯಾಗಮ ಯೋಜನೆ ಸಹ ಆರಂಭ

Last Updated : Jan 8, 2021, 05:49 PM IST
  • ಕೊರೊನಾ ಕಾರಣಕ್ಕೆ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ - ಕಾಲೇಜುಗಳು ಹಂತಹಂತವಾಗಿ ಆರಂಭವಾಗುತ್ತಿವೆ. ಈಗಾಗಲೇ 10 ಹಾಗೂ 12 ನೇ ತರಗತಿ ಜೊತೆಗೆ ವಿದ್ಯಾಗಮ ಯೋಜನೆ ಸಹ ಆರಂಭ
  • ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ, ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್ ‌ಲೈನ್‌ ತರಗತಿ ನಡೆಸಲು ತೀರ್ಮಾನ
  • ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ
ಸಂಕ್ರಾಂತಿ ನಂತರ PU-ಡಿಗ್ರಿ ವಿದ್ಯಾರ್ಥಿಗಳಿಗೂ 'ಆಫ್‌ ಲೈನ್ ಕ್ಲಾಸ್' ಶುರು..! title=

ಬೆಂಗಳೂರು: ಕೊರೊನಾ ಕಾರಣಕ್ಕೆ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಶಾಲಾ - ಕಾಲೇಜುಗಳು ಹಂತಹಂತವಾಗಿ ಆರಂಭವಾಗುತ್ತಿವೆ. ಈಗಾಗಲೇ 10 ಹಾಗೂ 12 ನೇ ತರಗತಿ ಜೊತೆಗೆ ವಿದ್ಯಾಗಮ ಯೋಜನೆ ಸಹ ಆರಂಭಗೊಂಡಿದೆ.

ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ತೀರ್ಮಾನ ಕೈಗೊಂಟಡಿದ್ದು, ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ(Degree), ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಆಫ್ ‌ಲೈನ್‌ ತರಗತಿ ನಡೆಸಲು ತೀರ್ಮಾನಿಸಲಾಗಿದೆ.

Sa. Ra. Mahesh: ಜಿ.ಟಿ.ದೇವೇಗೌಡರ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಾ.ರಾ.ಮಹೇಶ್..!

ಬೆಂಗಳೂರಿನಲ್ಲಿ ಇಂದು ಸರಕಾರಿ - ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಈ ಮಾಹಿತಿ ನೀಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದಾಖಲಾಯ್ತು 'FIR '..!‌?

ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷದ/ಸೆಮಿಸ್ಟರ್ ನ ಆಫ್‌ಲೈನ್‌ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಬೆನ್ನಲ್ಲೇ ಈ ತೀರ್ಮಾನ ಹೊರ ಬಿದ್ದಿದೆ. ಜೊತೆಗೆ ಪರೀಕ್ಷೆ ಹಾಗೂ ಶೈಕ್ಷಣಿಕ ವರ್ಷದ ಆರಂಭದ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

Corona Positive: ರಾಜ್ಯದಲ್ಲಿ ಶಾಲೆಗಳು ಆರಂಭವಾದ ಮೇಲೆ '161 ಶಿಕ್ಷಕರಿಗೆ ಕೊರೋನಾ ದೃಢ'..!

ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Ashwath Narayan: ‘ಪಕ್ಷದಲ್ಲಿ ನಾನೇ ಸೂಪರ್‌ಮ್ಯಾನ್, ಸೂಪರ್‌ಪವರ್ ಅಂದ್ರೆ ಕೆಲಸ ಆಗಲ್ಲ’

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News