ಬೆಂಗಳೂರು: ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಹುದ್ದೆಯ ಪ್ರಸ್ತಾಪವಿಲ್ಲ. ಹಾಗಾಗಿ ಉಪಮುಖ್ಯಮಂತ್ರಿಯಾಗಿ ಡಾ. ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸುವುದು ಸಂವಿಧಾನ ಬಾಹಿರ. ಈ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಹುದ್ದೆ ರದ್ದು ಮಾಡುವಂತೆ ಕೋರಿ ಮೈಸೂರಿನ ಶೇಖರ್ ಅಯ್ಯರ್ ಎಂಬುವವರು ಶುಕ್ರವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್​) ಸಲ್ಲಿಸಿದ್ದಾರೆ.


COMMERCIAL BREAK
SCROLL TO CONTINUE READING

ಸಂವಿಧಾನದಲ್ಲಿ ಉಪಮುಖ್ಯಮಂತ್ರಿ ಎಂಬ ಹುದ್ದೆ ಇಲ್ಲ. ಸಂವಿಧಾನದಲ್ಲಿ ಇಲ್ಲದೇ ಇರುವ ಹುದ್ದೆಯನ್ನು ಸೃಷ್ಟಿಸುವ ಅಗತ್ಯವಿದೆಯೇ, ಸಂವಿಧಾನ ಮಾನ್ಯತೆ ಇಲ್ಲದೆ ಹುದ್ದೆ ಕಾನೂನು ಬಾಹಿರ. ಹೀಗಾಗಿ ಡಿಸಿಎಂ ಹುದ್ದೆಯನ್ನು ರದ್ದು ಮಾಡಬೇಕು. ಜತೆಗೆ ಈ ಹುದ್ದೆಯನ್ನು ಕಾನೂನು ಬಾಹಿರವೆಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.