ಬೆಂಗಳೂರು : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (CET)ಮೆರಿಟ್ ಪಟ್ಟಿಗೆ ಈ ಬಾರಿ ಹಳೆಯ ನಿಯಮದಂತೆ ಪಿಯುಸಿ ಅಂಕಗಳು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಪ್ರಾಧಿಕಾರ ಸ್ಪಷ್ಟನೆ ನೀಡಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: America Green Card:ಗ್ರೀನ್‌ ಕಾರ್ಡ್‌ ಸಂಬಂಧಿತ ದೇಶವಾರು ಮಿತಿ ರದ್ದು: ಮಸೂದೆಗೆ ಅಂಗೀಕಾರ


ಕಳೆದ ವರ್ಷ ಕೋವಿಡ್ ಕಾರಣಕ್ಕೆ ಕೇವಲ ಪರೀಕ್ಷೆಯಲ್ಲಿನ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ, ಈ ಬಾರಿ  ಸಿಇಟಿಯಲ್ಲಿ ಪಡೆಯುವ ಅಂಕಗಳು (ಶೇ. 50) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳು (ಶೇ.50) ಸೇರಿ ಎರಡನ್ನು ಪರಿಗಣಿಸಿ ಮೆರಿಟ್ ಲಿಸ್ಟ್ ರೂಪಿಸಲಾಗುವುದು ಎಂದು ತಿಳಿಸಿದೆ.


ಅರ್ಜಿ ಸಲ್ಲಿಕೆ ಪ್ರಕ್ರಿಯೆ ಏಪ್ರಿಲ್ 12ರಿಂದ ಆರಂಭವಾಗಲಿದ್ದು, 2022ರ ಸಿಇಟಿ ಪರೀಕ್ಷೆ ಜೂನ್ 16 ರಿಂದ 18 ರವರೆಗೆ ನಡೆಸಲು ನಿರ್ಧರಿಸಲಾಗಿದೆ. ಸಿಇಟಿ ಬಗ್ಗೆ ವಿದ್ಯಾರ್ಥಿಗಳಿಗೆ ಇರುವ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರಗಳನ್ನು ಸಹ ಬಿಡುಗಡೆ ಮಾಡಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನು ಓದಿ: Kamal Pant : 'ಬೆಂಗಳೂರಿನ 4 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ'


ಕಳೆದ ವರ್ಷ ಕೊರೊನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯನ್ನು ನಡೆಸದೆ ನೇರವಾಗಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಇದರಿಂದ ಕೇವಲ ವಿದ್ಯಾರ್ಥಿಗಳ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗಿತ್ತು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ