ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಅನುಮಾನಸ್ಪದ ಸಾವು: ಪ್ರಾಂಶುಪಾಲ ಸೇರಿ ಇಬ್ಬರು ಅಮಾನತು
ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯ ಹಾಗೂ ವಸತಿ ಶಾಲೆಯ ಪಿಯು ವಿದ್ಯಾರ್ಥಿ ಮನಿತ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಜನವರಿ 02) ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
Kannada News: ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡದಿಂದ ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಈ ಸಂಬಂಧ ವಸತಿ ಶಾಲೆಯ ಪ್ರಾಂಶುಪಾಲೆ ರಾಜೇಶ್ವರಿ ಮತ್ತು ವಾರ್ಡನ್ ಚಿಂತನ್ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶಿಸಿದ್ದಾರೆ.
ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯ ಹಾಗೂ ವಸತಿ ಶಾಲೆಯ ಪಿಯು ವಿದ್ಯಾರ್ಥಿ ಮನಿತ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಜನವರಿ 02) ಮೈಸೂರಿನ ಅಪೊಲೋ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲರು ಮತ್ತು ವಾರ್ಡನ್ ಮೇಲ್ನೋಟಕ್ಕೆ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರನು ಜಿಲ್ಲಾಧಿಕಾರಿ ಅಮಾನತ್ತು ಮಾಡಿದ್ದಾರೆ.
ಇದನ್ನೂ ಓದಿ- ಸರ್ಕಾರಿ ಬಸ್ ಪ್ರಯಾಣ ದರ ಇನ್ಮುಂದೆ ಕಾಸ್ಟ್ಲಿ: ಶೇ 15ರಷ್ಟು ದರ ಹೆಚ್ಚಳ ಪರಿಷ್ಕರಣೆಗೆ ಸಚಿವ ಸಂಪುಟ ಅನುಮೋದನೆ
ಡಿ.30 ರಂದು ರಾತ್ರಿ ಮನಿತ್ ವಸತಿ ಶಾಲೆಯ ಕಟ್ಟಡದ ಮೇಲಂತಸ್ತಿನಿಂದ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಗಾಯಗೊಂಡ ಈತನಿಗೆ ಬೇಗೂರು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆಗೆ ತೀವ್ರ ಪೆಟ್ಟು ತಿಂದು ಕೋಮಾವಸ್ಥೆಯಲ್ಲಿದ್ದ ಮನೀತ್‌ನನ್ನು ಆತನ ಪೋಷಕರ ಮನವಿಯಂತೆ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕತ್ಸೆ ಕೊಡಿಸಲಾಗಿತ್ತು. ಆದರೆ, ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗುರವಾರಸಂಜೆ ಮನಿತ್ ಶವವನ್ನು ಮುಡಿಗುಂಡ ಬಡಾವಣೆಯಲ್ಲಿರುವ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ.
ಇದನ್ನೂ ಓದಿ- ಹೊಸ ವರ್ಷಕ್ಕೆ ಸಾರ್ವಜನಿಕರಿಗೆ ಬ್ಯಾಕ್ ಟೂ ಬ್ಯಾಕ್ ಶಾಕ್ : ಬಸ್ ದರ, ನೀರಿನ ಬಿಲ್ ಏರಿಕೆಗೆ ಪ್ರಸ್ತಾವನೆ
ಇನ್ನು, ಈ ಕುರಿತು ಡಿಸಿ ಶಿಲ್ಪಾನಾಗ್ ಮಾತನಾಡಿ, ವಿದ್ಯಾರ್ಥಿ ಮೃತಪಟ್ಟಿರುವುದು ನೋವಿನ ಸಂಗತಿ. ಘಟನೆ ಬಗ್ಗೆ ನಿಖರ ಮಾಹಿತಿ ತಿಳಿಯಲು ಉಪ ವಿಭಾಗಧಿಕಾರಿ ಸೇರಿದಂತೆ ಮೂವರ ಸಮಿತಿ ನೇಮಿಸಿದ್ದು ನಾಳೆ ವರದಿ ಕೊಡಲಿದ್ದು ಅದರ ಆಧಾರದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು. ವಿದ್ಯಾರ್ಥಿ ಮೃತಪಟ್ಟ ಸಂಬಂಧ ಈಗಾಗಲೇ ಸರ್ಕಾರಕ್ಕೆ ಮಾಹಿತಿ ಕೊಡಲಾಗಿದೆ. ಸಿಸಿಟಿವಿ ವೈರ್ ಕೂಡ ಘಟನೆ ನಡೆದ ರಾತ್ರಿ ತುಂಡಾಗಿದ್ದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.