"ಸಮಾಜದಲ್ಲಿ ಸಾಮರಸ್ಯ ಮೂಡಿಸುವಲ್ಲಿ ಪೂಜ್ಯ ಫಕೀರ ಸಿದ್ದರಾಮ ಮಹಾಸ್ವಾಮಿಗಳ ಕೊಡುಗೆ ಅಪಾರ"

 ಸಮಾಜದಲ್ಲಿ ಸಾಮರಸ್ಯ ಮೂಡಿಸುವಲ್ಲಿ ಪೂಜ್ಯ ಫಕೀರ ಸಿದ್ದರಾಮ ಮಹಾಸ್ವಾಮಿಗಳ ಕೊಡುಗೆ ಅಪಾರ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.

Written by - Manjunath N | Last Updated : Feb 2, 2024, 09:08 AM IST
  • ಪೂಜ್ಯರ ಉಪನ್ಯಾಸಗಳನ್ನು ಆಧರಿಸಿದ ಜೀವನ ದರ್ಶನ ಪ್ರವಚನ ಗ್ರಂಥಗಳನ್ನು ಬಿಡುಗಡೆಗೊಳಿಸುವ ಸದವಕಾಶ ನನಗೆ ದೊರೆತಿದ್ದು ಸಂತಸ ತರಿಸಿದೆ.
  • ಮಠದ ಪಾತ್ರವನ್ನು, ಶ್ರೀಗಳವರು ನಾಡಿಗೆ ನೀಡಿದ ಕೊಡುಗೆಗಳನ್ನು ಭಕ್ತಿಯಿಂದ ಸ್ಮರಿಸಿದೆ.
  • ಜೊತೆಗೆ ಮಹಾಸಂಸ್ಥಾನ ಮಠಕ್ಕೂ ನಮ್ಮ ವಿಜಯಪುರಕ್ಕೂ ಇರುವ ಅವಿನಾಭಾವ ಸಂಬಂಧ ಕುರಿತು ಪ್ರಸ್ತಾಪಿಸಿದೆ.
 "ಸಮಾಜದಲ್ಲಿ ಸಾಮರಸ್ಯ ಮೂಡಿಸುವಲ್ಲಿ ಪೂಜ್ಯ ಫಕೀರ ಸಿದ್ದರಾಮ ಮಹಾಸ್ವಾಮಿಗಳ ಕೊಡುಗೆ ಅಪಾರ" title=

ಹುಬ್ಬಳ್ಳಿ: ಸಮಾಜದಲ್ಲಿ ಸಾಮರಸ್ಯ ಮೂಡಿಸುವಲ್ಲಿ ಪೂಜ್ಯ ಫಕೀರ ಸಿದ್ದರಾಮ ಮಹಾಸ್ವಾಮಿಗಳ ಕೊಡುಗೆ ಅಪಾರ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.

ಅವರು ನೆಹರು ಮೈದಾನದಲ್ಲಿ ನಡೆದ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮ ಮಹಾಸ್ವಾಮಿಗಳು ಭಾವೈಕ್ಯತಾ ಮಹಾ ಸಂಸ್ಥಾನ ಪೀಠ, ಶಿರಹಟ್ಟಿ ಪೂಜ್ಯರ ಅಮೃತ ಮಹೋತ್ಸವ ಹಾಗೂ ಭಾವೈಕ್ಯತಾ ರಥಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಇದನ್ನೂ ಓದಿ: ದ್ರಾಕ್ಷಿ ಅಥವಾ ಒಣದ್ರಾಕ್ಷಿ, ಈ ಎರಡರಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ತಿಳಿಯಿರಿ

ಪೂಜ್ಯರ ಉಪನ್ಯಾಸಗಳನ್ನು ಆಧರಿಸಿದ ಜೀವನ ದರ್ಶನ ಪ್ರವಚನ ಗ್ರಂಥಗಳನ್ನು ಬಿಡುಗಡೆಗೊಳಿಸುವ ಸದವಕಾಶ ನನಗೆ ದೊರೆತಿದ್ದು ಸಂತಸ ತರಿಸಿದೆ. ನಂತರ ನಡೆದ ವೇದಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಪೂಜ್ಯರ ಹಾಗೂ ಮಠದ ಪಾತ್ರವನ್ನು, ಶ್ರೀಗಳವರು ನಾಡಿಗೆ ನೀಡಿದ ಕೊಡುಗೆಗಳನ್ನು ಭಕ್ತಿಯಿಂದ ಸ್ಮರಿಸಿದೆ. ಜೊತೆಗೆ ಮಹಾಸಂಸ್ಥಾನ ಮಠಕ್ಕೂ ನಮ್ಮ ವಿಜಯಪುರಕ್ಕೂ ಇರುವ ಅವಿನಾಭಾವ ಸಂಬಂಧ ಕುರಿತು ಪ್ರಸ್ತಾಪಿಸಿದೆ ಎಂದು ಉಲ್ಲೇಖಿಸಿದರು.

ಇದನ್ನೂ ಓದಿ :  ಮಾಲ್ಡೀವ್ಸ್ ನೂತನ ಅಧ್ಯಕ್ಷ ಅಧಿಕಾರ ಕಳೆದುಕೊಳ್ಳುವ ದಿನ ಸನ್ನಿಹಿತವೇ?

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಮೂರುಸಾವಿರ ಮಠದ ಪರಮ ಪೂಜ್ಯ ಶ್ರೀ ಮ.ನಿಂ.ಪ್ರ. ಜಗದ್ಗುರು ಡಾ. ಗುರುಸಿದ್ದರಾಜ ಯೋಗೇಂದ್ರ ಮಹಾಸ್ವಾಮಿಗಳು, ಬಾಲೆಹೊಸೂರಿನ ಪರಮ ಪೂಜ್ಯ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮಿಗಳು ಸೇರಿದಂತೆ 60ಕ್ಕೂ ಹೆಚ್ಚು ಮಠಾಧೀಶರು, ಸಚಿವ ಸಂಪುಟದ ಸಹೋದ್ಯೋಗಿಗಳು, ಪಕ್ಷಾತೀತವಾಗಿ ವಿವಿಧ ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.May be an image of flute and text

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

 

 

 

Trending News