ಹುಬ್ಬಳ್ಳಿ: ರೈತರ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರವು 2 ಲಕ್ಷ 37 ಸಾವಿರ ಕೋಟಿ ರೂ.ಹಣ ನೀಡಿದೆ .ಧಾರವಾಡ ಜಿಲ್ಲೆಯಲ್ಲಿಯೂ 21 ಸ್ಥಳಗಳಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ ಹೇಳಿದರು.


COMMERCIAL BREAK
SCROLL TO CONTINUE READING

ಬ್ಯಾಹಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಇಂದು  ಬೆಂಬಲ ಬೆಲೆ ಯೋಜನೆಯಡಿ ಕಡಲೆ ಖರೀದಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.


ಇದನ್ನೂ ಓದಿ: ಅಂತರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಆತಿಥ್ಯ ಭಾರತದ ಮಡಿಲಿಗೆ


ರೈತನ ಉತ್ಪನ್ನಗಳಿಗೆ ಉತ್ತಮ ಬೆಲೆ ಒದಗಿಸುವುದು,ಸಾಲ ಮನ್ನಾಕ್ಕಿಂತಲೂ ಅತ್ಯುತ್ತಮ ಹಾಗೂ ಅತ್ಯಗತ್ಯ ಕಾರ್ಯವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಯೂ ಕೂಡ ಇದಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಖರೀದಿಯಾದ ಉತ್ಪನ್ನಗಳ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆ ಮಾಡುವ ವ್ಯವಸ್ಥೆ ಇದೆ.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ ನೋಂದಾಯಿತ 1 ಲಕ್ಷ 26 ಸಾವಿರ ರೈತರಿಗೆ ಈವರೆಗೆ 332 ಕೋಟಿ ರೂ .ಒದಗಿಸಲಾಗಿದೆ.


ಆಹಾರ ಸಂಸ್ಕರಣೆ ಉದ್ದಿಮೆಗಳ ಸ್ಥಾಪನೆ,ರಾಸುಗಳ ಕಾಲು-ಬಾಯಿ ಬೇನೆ ರೋಗ ನಿವಾರಣೆಗೆ ಹಣ ಒದಗಿಸಲಾಗಿದೆ. ಬಿತ್ತನೆ ಬೀಜಗಳಿಗೆ ಬಹುರಾಷ್ಟ್ರೀಯ ಕಂಪನಿಗಳ ಮೇಲಿನ ಅವಲಂಬನೆ ಕಡಿಮೆ ಮಾಡಲು ವಿವಿಧ 1300 ತಳಿಗಳ ಬೀಜೋತ್ಪಾದನೆ ಮಾಡಲಾಗಿದೆ. ಜಲ ಜೀವನ ಮಿಷನ್ ಅಡಿ ಮನೆ ಮನೆಗೆ ನಳದ ನೀರು ಪೂರೈಸಲು ಬ್ಯಾಹಟ್ಟಿ ಗ್ರಾಮವೊಂದಕ್ಕೆ ಸುಮಾರು 6 ಕೋಟಿ ರೂ.ಖರ್ಚು ಮಾಡಲಾಗುತ್ತಿದೆ.ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನವಲಗುಂದ ವಿಧಾಸಭಾ ಕ್ಷೇತ್ರಕ್ಕೆ 60 ಕೋಟಿ ರೂ.ನೀಡಲಾಗಿದೆ.ವಿವಿಧ ಉದ್ಯಮಗಳ‌ ಸಿಎಸ್‌ಆರ್ ನಿಧಿಯಡಿ ಜಿಲ್ಲೆಯ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್‌ಗಳನ್ನು ನಿರ್ಮಿಸಲಾಗಿದೆ .ಸರ್ವಾಂಗೀಣ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದರು.


ಇದನ್ನೂ ಓದಿ: Virat Kohli : ಟಿ20 ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ : ಟೀಂನಿಂದ ಕೊಹ್ಲಿ ಔಟ್!


ಕೈಮಗ್ಗ,ಜವಳಿ ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ,ದಲ್ಲಾಳಿ,ಮಧ್ಯಮರ್ತಿಗಳ ಹಸ್ತಕ್ಷೇತ ತಪ್ಪಿಸಲು ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನಗಳ ಖರೀದಿ ಮಾಡಲಾಗುತ್ತಿದೆ. ಜನಪರ,ರೈತಪರ ಕಾರ್ಯಕ್ರಮ ಇದಾಗಿದೆ. ಜಿಲ್ಲೆಯಲ್ಲಿ ಮೊದಲು 7 ಕಡಲೆ ಖರೀದಿ ಕೇಂದ್ರಗಳಿರುತ್ತಿದ್ದವು,ನಂತರ 17 ಕ್ಕೆ ಹೆಚ್ಚಿಸಲಾಯಿತು. ಈ ಬಾರಿ 21 ಸ್ಥಳಗಳಲ್ಲಿ ಕಡಲೆ ಖರೀದಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ.ಇದರಲ್ಲಿ ನವಲಗುಂದ ಮತಕ್ಷೇತ್ರವೊಂದರಲ್ಲಿಯೇ 13 ಕಡಲೆ ಖರೀದಿ ಕೇಂದ್ರಗಳು ಇರಲಿವೆ.ಕೇಂದ್ರ ಸ್ಥಾಪನೆಗೆ ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಆಸಕ್ತಿ ವಹಿಸಿದರೆ ಅಲ್ಲಿ ಪ್ರಾರಂಭಿಸಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಒತ್ತಾಸೆಯಾಗಿ ನಿಂತಿದ್ದಾರೆ.


ಇದನ್ನೂ ಓದಿ: ಕೋರಿಯರ್ ನಲ್ಲಿ ಬೆಂಗಳೂರಿಗೆ ಬಂದಿದ್ದ 7 ಕೋಟಿ ಮೌಲ್ಯದ ಹೆರಾಯಿನ್ ವಶಕ್ಕೆ!


ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರೈತರು ಹೊಲ ಮನೆಗಳಿಗೆ ತೆರಳಲು ಅನುಕೂಲವಾಗುವ ಬ್ಯಾಹಟ್ಟಿ-ಸುಳ್ಳ ರಸ್ತೆಯನ್ನು 6 ಕೋಟಿ 25 ಲಕ್ಷ ರೂ.ವೆಚ್ಚದಲ್ಲಿ, ಬ್ಯಾಹಟ್ಟಿ-ತಿರ್ಲಾಪುರ-ಹೆಬಸೂರ ರಸ್ತೆಯನ್ನು 5 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಇಂದು ಚಾಲನೆ ನೀಡಲಾಗುತ್ತಿದೆ. ತುಪ್ಪರಿಹಳ್ಳ-ಬೆಣ್ಣೆಹಳ್ಳ ನೀರಿನಿಂದ ರೈತರ ಹೊಲಗಳಿಗೆ ನೀರಾವರಿ ಕಲ್ಪಿಸಲು ಯೋಜನೆ ರೂಪಿಸಲಾಗಿದೆ ಎಂದರು.
ಬ್ಯಾಹಟ್ಟಿ ಗ್ರಾ.ಪಂ.ಅಧ್ಯಕ್ಷ ಪರಮೇಶ್ವರ ಯಡ್ರಾವಿ,ಉಪಾಧ್ಯಕ್ಷೆ ಲಲಿತಾ ಬೆಟ್ಟದೂರ,ಪ್ರಾಥಮಿಕ ಕೃಷಿ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ಮಲ್ಲಪ್ಪ ಗುಡಿ,ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಸಿ.ವಿ.ಪಾಟೀಲ ಮತ್ತಿತರರು ಇದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.