ಬೆಂಬಲ ಬೆಲೆಯಡಿ ಕಡಲೆ ಖರೀದಿ: ಹಣ ಪಾವತಿಯಲ್ಲಿ ವಿಳಂಬ

ಕಳೆದ ವರ್ಷಕ್ಕಿಂತ ಈ ಬಾರಿ ಪ್ರತಿ ಕ್ವಿಂಟಲ್‌ಗೆ ₹105 ಹೆಚ್ಚಳವಾಗಿದ್ದರೂ ಬೆಂಬಲ ಬೆಲೆಯಡಿ ತೆರೆದಿರುವ ಖರೀದಿ ಕೇಂದ್ರಗಳಲ್ಲಿ ಕಡಲೆ ಮಾರಾಟ ಮಾಡಲು ರೈತರು ಹಿಂದೇಟು ಹಾಕಿದ್ದಾರೆ.

Written by - Zee Kannada News Desk | Last Updated : Apr 15, 2023, 07:54 AM IST
  • ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹5,200ರವರೆಗೆ ಕಡಲೆ ಮಾರಾಟವಾಗುತ್ತಿದೆ.
  • ದರ ಇನ್ನೂ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿರುವ ರೈತರು ಕಡಲೆ ಸಂಗ್ರಹಿಸಿಟ್ಟುಕೊಂಡಿದ್ದಾರೆ.
  • ಕೆಲವರು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ.
 ಬೆಂಬಲ ಬೆಲೆಯಡಿ ಕಡಲೆ ಖರೀದಿ: ಹಣ ಪಾವತಿಯಲ್ಲಿ ವಿಳಂಬ title=
screengrab

ಬೆಂಗಳೂರು: ಕಳೆದ ವರ್ಷಕ್ಕಿಂತ ಈ ಬಾರಿ ಪ್ರತಿ ಕ್ವಿಂಟಲ್‌ಗೆ ₹105 ಹೆಚ್ಚಳವಾಗಿದ್ದರೂ ಬೆಂಬಲ ಬೆಲೆಯಡಿ ತೆರೆದಿರುವ ಖರೀದಿ ಕೇಂದ್ರಗಳಲ್ಲಿ ಕಡಲೆ ಮಾರಾಟ ಮಾಡಲು ರೈತರು ಹಿಂದೇಟು ಹಾಕಿದ್ದಾರೆ.

ಇದರ ಪರಿಣಾಮ ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಕಡಲೆ ಖರೀದಿ ಆಗಿಲ್ಲ.ಈ ಬಾರಿ ಇಳುವರಿ ಕಡಿಮೆ ಆಗಿದ್ದರಿಂದ ಸಾಕಷ್ಟು ರೈತರು ಖರೀದಿ ಕೇಂದ್ರದಲ್ಲಿ ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ, ಮಾರುಕಟ್ಟೆ ಮತ್ತು ಖರೀದಿ ಕೇಂದ್ರದ ದರ ಹೆಚ್ಚೂ ಕಡಿಮೆ ಸಮನಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆಯನ್ನು ಮಾರುಕಟ್ಟೆಯಲ್ಲಿಮಾರಾಟ ಮಾಡಲು ಹೆಚ್ಚಿನ ಉತ್ಸಾಹ ತೋರಿದ್ದಾರೆ. ಖರೀದಿ ಕೇಂದ್ರದಲ್ಲಿ ಹಣ ಪಾವತಿ ವಿಳಂಬ ಮತ್ತು ಗುಣಮಟ್ಟದ ಹೆಸರಿನಲ್ಲಿ ಸತಾಯಿಸುತ್ತಿರುವುದೇ ರೈತರ ಈ ನಿರ್ಧಾರಕ್ಕೆ ಮುಖ್ಯ ಕಾರಣ ಎಂಬ ಮಾತು ಕೇಳಿ ಬರುತ್ತಿದೆ. 

ಇದನ್ನೂ ಓದಿ: Shahneel Gill: ‘ದಿಲ್’ ಗೆದ್ದಳು ಅಪ್ಸರೆ..! ಶುಭ್ಮನ್ ಗಿಲ್ ಸಹೋದರಿಯ ಮುಂದೆ ಬಾಲಿವುಡ್ ನಟಿಯರು ಝೀರೋ,

ಕಳೆದ ಬಾರಿ ಸಮಯಕ್ಕೆ ಸರಿಯಾಗಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ, ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಎಫ್ಎಕ್ಯೂ ಗುಣಮಟ್ಟದ ಪ್ರತಿ ಕ್ವಿಂಟಲ್ ಕಡಲೆಯನ್ನು ₹5,230ಕ್ಕೆ ಖರೀದಿ ಮಾಡಲಾಗಿತ್ತು. ಈ ಬಾರಿ ಅದನ್ನು ₹5,335ಕ್ಕೆ ಏರಿಕೆ ಮಾಡಲಾಗಿದೆ. ಆದರೂ, ಜಿಲ್ಲೆಯಲ್ಲಿ ನೋಂದಾಯಿಸಿಕೊಂಡ 19,335 ರೈತರಲ್ಲಿ ಈವರೆಗೆ 6,737 ಜನರು ಮಾತ್ರ 83,526 ಕ್ಟಿಂಟಲ್ ಕಡಲೆ ಮಾರಾಟ ಮಾಡಿದ್ದಾರೆ.

ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ₹5,200ರವರೆಗೆ ಕಡಲೆ ಮಾರಾಟವಾಗುತ್ತಿದೆ. ದರ ಇನ್ನೂ ಹೆಚ್ಚಾಗಬಹುದು ಎಂಬ ನಿರೀಕ್ಷೆಯಲ್ಲಿರುವ ರೈತರು ಕಡಲೆ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಕೆಲವರು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ಖರೀದಿಗೆ ನೀಡಿದ್ದ ಸಮಯ ಮುಗಿಯುತ್ತ ಬಂದರೂ ನಿರೀಕ್ಷಿತ ಮಟ್ಟದಲ್ಲಿ ಕಡಲೆ ಖರೀದಿ ಆಗಿಲ್ಲ ಎಂಬುದು ಅಧಿಕಾರಿಗಳ ವಲಯದಲ್ಲಿ ‌ಕೇಳಿ ಬರುವ ಮಾತು.

ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿದ್ದರಿಂದ ರೈತರು ಉತ್ತಮ ಇಳುವರಿ ಪಡೆದಿದ್ದರು. ಆದರೆ, ಹಿಂಗಾರು ಹಂಗಾಮಿನಲ್ಲಿ ಸರಿಯಾಗಿ ಮಳೆ ಆಗದ ಪರಿಣಾಮ ಒಂದು ಎಕರೆಗೆ ಕನಿಷ್ಠ 2 ರಿಂದ ಗರಿಷ್ಠ 4 ಕ್ವಿಂಟಲ್‌ನಷ್ಟು ಕಡಲೆ ಒಕ್ಕಣೆ ಮಾಡಲಾಗಿದ್ದು, ಕಳೆದ ಮೂರು ವರ್ಷಗಳಲ್ಲಿ ಅತ್ಯಂತ ಕಡಿಮೆ ಇಳುವರಿ ದಾಖಲಾಗಿದೆ.

‘ಕಳೆದ ವರ್ಷದಂತೆ ಈ ಬಾರಿಯೂ ಗುಣಮಟ್ಟದ ನೆಪವೊಡ್ಡಿ ರೈತರಿಂದ ಖರೀದಿ ಮಾಡಿ ಗೋದಾಮುಗಳಿಗೆ ಸಾಗಿಸಿದ್ದ 30 ಟನ್ ಕಡಲೆಯನ್ನು ಖರೀದಿ ಕೇಂದ್ರಗಳಿಗೆ ವಾಪಸ್ ಮಾಡಲಾಗಿದೆ. ಅವೆಲ್ಲವನ್ನೂ ರೈತರ ಸಮ್ಮುಖದಲ್ಲಿ ಮತ್ತೆ ಸಂಸ್ಕರಿಸಿ, ವಾಪಸ್ ಕಳುಹಿಸಲಾಗಿದೆ. ಮತ್ತೊಮ್ಮೆ ವಾಪಸ್ಸಾದರೆ, ಅದು ಸರ್ಕಾರದ ಜವಾಬ್ದಾರಿ’ ಎಂದು ಟಿಎಪಿಸಿಎಂಎಸ್‌ ಇಲಾಖೆ ತನ್ನ ಮಾಹಿತಿ ನೀಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News