ಬೆಂಗಳೂರು : ಪೊಲೀಸ್ ಇಲಾಖೆಯಲ್ಲಿ ತಮ್ಮ ಕಟ್ಟುನಿಟ್ಟಿನ ಕ್ರಮ ವಿನೂತನ ಪ್ರಯತ್ನಗಳ ಮೂಲಕ ಸುದ್ದಿಯಲ್ಲಿರುವ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಮತ್ತೊಂದು ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇನ್ಮುಂದೆ ಆಗ್ನೇಯ ವಿಭಾಗದ ಪೊಲೀಸ್ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್‌ಗೆ ಬರುವ ಕರೆಗಳನ್ನ ಸ್ವೀಕರಿಸದೇ ಇರಲಾಗದು. ಜೊತೆಗೆ ತಮ್ಮ ವಾಟ್ಸ್ಯಾಪ್ ಡಿಸ್‌ಪ್ಲೇ ಪಿಕ್ಚರ್ ನಲ್ಲಿ ತಮ್ಮ ಫೋಟೋ ಸಹ ಹಾಕುವಂತಿಲ್ಲ. ಕರೆ ಸ್ವೀಕರಿಸದೇ ಇದ್ದಲ್ಲಿ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಲಿದೆ.
ವಾಟ್ಸ್ಯಾಪ್ ಡಿಪಿಗೂ, ಫೋನ್ ಕರೆ ರಿಸೀವ್ ಮಾಡದೆ ಇರುವುದಕ್ಕೂ ಏನು ಸಂಬಂಧ ಎಂದು ನೀವು ಚಿಂತಿಸಬೇಡಿ. ಇನ್ಮುಂದೆ ಆಗ್ನೇಯ ವಿಭಾಗದ ಎಲ್ಲಾ ಪೊಲೀಸರು ಲೋಕಸ್ಪಂದನ ಎಂಬ ಕ್ಯೂಆರ್ ಕೋಡನ್ನ ತಮ್ಮ ವಾಟ್ಸ್ಯಾಪ್ ಡಿಪಿಯಲ್ಲಿ ಹಾಕಬೇಕು. ಡಿಸಿಪಿ ಸಿಕೆ ಬಾಬಾ ತಮ್ಮ ವಿಭಾಗದ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ ಕುರಿತು ಮಾಹಿತಿ ಪಡೆಯಲು ಈ ಲೋಕಸ್ಪಂದನ ವ್ಯವಸ್ಥೆ ಮಾಡಿದ್ದಾರೆ. ಪೊಲೀಸರ ಕುರಿತು ಸಾರ್ವಜನಿಕರು ಏನಾದರೂ ಮೆಚ್ಚುಗೆ ವ್ಯಕ್ತಪಡಿಸುವುದಿರಲಿ ಅಥವಾ ಆಕ್ಷೇಪ ವ್ಯಕ್ತಪಡಿಸುವುದಿರಲಿ ಲೋಕಸ್ಪಂದನ ವ್ಯವಸ್ಥೆಯ ಮೂಲಕ ಮಾಡಬಹುದಾಗಿದೆ.
ಇದನ್ನೂ ಓದಿ : ʼಕೊನೆಯ ಅಧಿವೇಶನʼದಲ್ಲಿ ʼವಿದಾಯ ಭಾಷಣʼ ಮಾಡಿದ ʼಕೇಸರಿ ಕಲಿ ಬಿಎಸ್‌ವೈʼ..!
ಸಾರ್ವಜನಿಕರಿಗೆ ಹೇಗೆ ಲಭ್ಯ? :
'ಪೊಲೀಸರು ಸಾರ್ವಜನಿಕರ ಫೋನ್ ಕರೆ ಸ್ವೀಕರಿಸದೇ ಇದ್ದರೆ ಸಾರ್ವಜನಿಕರು ಆ ಅಧಿಕಾರಿಯ ವಾಟ್ಸ್ಯಾಪ್ ಡಿಪಿಯಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಬೇಕು. ಬಳಿಕ ಮೆಸೇಜ್ ವ್ಯವಸ್ಥೆ ಲಭ್ಯವಾಗಲಿದೆ. ನೀವು ಅಧಿಕಾರಿ ಪೋನ್ ಕರೆ ಸ್ವೀಕರಿಸುತ್ತಿಲ್ಲ ಎಂದು ಮೆಸೇಜ್ ರವಾನಿಸಿದರೆ, ನೇರವಾಗಿ ಆ ಮೆಸೆಜ್ ಡಿಸಿಪಿ ಸಿ.ಕೆ.ಬಾಬಾರ ಮೊಬೈಲ್ ಗೆ ತಲುಪಲಿದೆ'. ಇದರಿಂದಾಗಿ ಯಾವ ಅಧಿಕಾರಿ ಸಾರ್ವಜನಿಕರಿಗೆ ಸೂಕ್ತ ಸ್ಪಂದನೆ ಮಾಡುತ್ತಿಲ್ಲ ಎಂಬುದನ್ನ ಸುಲಭವಾಗಿ ಪತ್ತೆ ಹಚ್ಚಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಬಹುದು.
ಈ ಕ್ಯೂ ಆರ್ ಕೋಡ್ ಮೂಲಕ ಪೊಲೀಸರು ಇನ್ನಷ್ಟು ಜನಸ್ನೇಹಿಯಾಗಲು ಸಾಧ್ಯವಾಗಲಿದೆ ಎಂದು ಆಗ್ನೇಯ ವಿಭಾಗ ಡಿಸಿಪಿ ಸಿ.ಕೆ.ಬಾಬಾ ಇಂದಿನಿಂದಲೇ ಈ ನೂತನ ವ್ಯವಸ್ಥೆ ಜಾರಿಗೊಳಿಸಿದ್ದಾರೆ.
ಇದನ್ನೂ ಓದಿ : ʼಹ್ಯಾಪಿ ಎಂಡಿಂಗ್ʼ ಬೇಕು ಅಂತ ಯುವತಿ ಮೇಲೆ ʼಅತ್ಯಾಚಾʼರವೆಸಗಿದ ಕಾಮುಕ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.