ಬೆಂಗಳೂರು: ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.


COMMERCIAL BREAK
SCROLL TO CONTINUE READING

ಬುಧವಾರ ಕೃಷ್ಣಾದಲ್ಲಿ ತಮ್ಮನ್ನು ಭೇಟಿಯಾದ ಮುಧೋಳ ತಾಲೂಕಿನ ರೈತರ ನಿಯೋಗದೊಂದಿಗೆ ಚರ್ಚೆ ನಡೆಸಿದರು. ನೀರಾವರಿ ಸಚಿವರು, ಕಂದಾಯ ಸಚಿವರು ಹಾಗೂ ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಆದಷ್ಟು ಬೇಗನೆ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.


ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಗುಣಮಟ್ಟದಲ್ಲಿರಬೇಕು ಎನ್ನುವುದು ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ


ಘಟಪ್ರಭಾ ನದಿಯ ಪ್ರವಾಹದಿಂದಾಗಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಒಟ್ಟು 34639 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 2019 ರಲ್ಲಿ 15088 ಹೆಕ್ಟೇರ್‌, 2021ರಲ್ಲಿ  7051 ಹೆಕ್ಟೇರ್ ಮತ್ತು 2024‌ ರಲ್ಲಿ 12500 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಉಂಟಾಗಿದೆ. ಇದಕ್ಕೆ ಸೂಕ್ತ ಬೆಳೆ ಪರಿಹಾರ ಹಾಗೂ ಶಾಶ್ವತ ಪರಿಹಾರ ಒದಗಿಸಬೇಕು ಎಂದು ರೈತರ ನಿಯೋಗ ಮನವಿ ಮಾಡಿತು.
 
ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ನೀರಾವರಿ ಕ್ಷೇತ್ರದ ಕಬ್ಬಿನ ಬೆಳೆಗೆ ಪ್ರತಿ ಹೆಕ್ಟೇರಿಗೆ ರೂ. 22,500 ರಂತೆ ಪರಿಹಾರ ಧನ ನಿಗದಿಪಡಿಸಲಾಗಿದ್ದು, ಇತರ ಬೆಳೆಗಳಿಗೆ ರೂ. 17000 ನಿಗದಿಪಡಿಸಲಾಗಿದೆ. ಇದರಿಂದ ರೈತರಿಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ. 


ಈಗಾಗಲೇ ಕೃಷಿ ವಿಶ್ವವಿದ್ಯಾಲಯ ಕರ್ನಾಟಕದ ಕಬ್ಬು ಬೆಳೆಯಲು ತಗಲುವ ವೆಚ್ಚ ಪ್ರತಿ ಹೆಕ್ಟೇರ್‌ಗೆ 1.50 ಲಕ್ಷ ರೂ. ನಿಗದಿಪಡಿಸಿದ್ದು, ಇದು ಸಹ ಅವೈಜ್ಞಾನಿಕವಾಗಿದೆ.  ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇದು ಕನಿಷ್ಟವಾಗಿದ್ದು, ಪ್ರತಿ ಎಕರೆ ಕಬ್ಬು ಬೆಳೆಗೆ ರೂ. 1 ಲಕ್ಷ ಹಾಗೂ ಇತರ ಬೆಳೆಗಳಿಗೆ ರೂ.50 ಸಾವಿರ ಪರಿಹಾರವನ್ನು ನೀಡಬೇಕು.


ಇದನ್ನೂ ಓದಿ: ಡಿಗ್ರಿ ಮುಗಿದರೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೇಕಿಲ್ಲ ಉದ್ಯೋಗಾವಕಾಶ...? ಇಲ್ಲಿವೆ 6 ಪ್ರಮುಖ ಕಾರಣಗಳು


ಎನ್‌.ಡಿ.ಆರ್.ಎಫ್‌ ಮತ್ತು ಎಸ್.ಡಿ.ಆರ್.ಎಫ್‌ ಮಾನದಂಡಗಳನ್ನು ಪರಿಗಣಿಸದೆ ಹಾನಿಗೊಳಗಾದ ಎಲ್ಲಾ ಕ್ಷೇತ್ರಕ್ಕೂ ಪರಿಹಾರ ಧನವನ್ನು ನೀಡಬೇಕು ಎಂದು ರೈತರು ಮನವಿ ಸಲ್ಲಿಸಿದರು. ಅಬಕಾರಿ ಸಚಿವ ಆರ್.‌ ಬಿ.ತಿಮ್ಮಾಪುರ ಮತ್ತಿತರರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.