ಧಾರವಾಡ: ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ ಮಾಡುವ ರೈತರ ಹೆಸರಿಗೆ ಖಾತಾ ಮಾಡಲು ನಿಯಮಾವಳಿ ಪ್ರಕಾರ ಕ್ರಮ ವಹಿಸಲಾಗುವುದು ಎಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.


COMMERCIAL BREAK
SCROLL TO CONTINUE READING

ಅವರು ಇಂದು ಸಂಜೆ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಧಾರವಾಡ, ಅಳ್ನಾವರ ಹಾಗೂ ಕಲಘಟಗಿ ತಾಲೂಕಿನ ಫಾರ್ಮಿಂಗ್ ಸೊಸೈಟಿ ಜಮೀನನ್ನು ಸಾಗುವಳಿದಾರರಿಗೆ ಮಂಜೂರಾತಿ ಕುರಿತು ಸಂಬಂಧಿಸಿದ ರೈತರು ಹಾಗೂ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಧಾರವಾಡ, ಅಳ್ನಾವರ ಹಾಗೂ ಕಲಘಟಗಿ ತಾಲೂಕಿನಲ್ಲಿ ಫಾರ್ಮಿಂಗ್ ಸೊಸೈಟಿಗಳಿಗೆ ಸರ್ಕಾರಿ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ಕೃಷಿ ಕಾರ್ಯಗಳಿಗೆ ಬಳಸಲು ಸರ್ಕಾರವು ಜಮೀನು ಮಂಜೂರು ಮಾಡಿತ್ತು. ಈಗ ಸೊಸೈಟಿಗಳು ಅಸ್ಥಿತ್ವ ಕಳೆದುಕೊಂಡಿದ್ದು, ಸಾಗುವಳಿ ಮಾಡುತ್ತಿದ್ದ ರೈತರೆ ಆ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿದ್ದಾರೆ. ಈಗಾಗಲೆ ವ್ಯವಸಾಯ ಮಾಡುತ್ತಿರುವ ರೈತರ ಹೆಸರಿಗೆ ಜಮೀನಿನ ಮಾಲಿಕತ್ವ ನೀಡಲು ತಿರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು.


ಇದನ್ನೂ ಓದಿ: Bribery Case: 15 ಕಿಮೀ ಕಾರ್ ಚೇಸ್ ಮಾಡಿ ಫುಡ್‍ ಇನ್ಸ್‌ಪೆಕ್ಟರ್‌ ಬಂಧಿಸಿದ ಲೋಕಾಯುಕ್ತ ಪೊಲೀಸರು!


ಸಂಬಂಧಿಸಿದ ತಾಲೂಕಿನ ತಹಶೀಲ್ದಾರ ಹಾಗೂ ಅವರ ಅಧಿಕಾರಿಗಳ ಮೂಲಕ ಸೊಸೈಟಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ. ಈಗಾಗಲೇ ಬಹಳಷ್ಟು ರೈತರು ನಿಗಧಿತ ಅರ್ಜಿ ನಮೂನೆಯನ್ನು ಸಲ್ಲಸಿದ್ದು, ಇವು ಪರಿಶೀಲನೆ ಹಂತದಲ್ಲಿವೆ. ಕೆಲವು ರೈತರು ಭೂಮಿಯನ್ನು ಸಾಗುವಳಿ ಮಾಡುತ್ತಿದ್ದರೂ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿರುವುದಿಲ್ಲ. ಇಂತಹ ರೈತರಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಮಾಡಿಕೊಡಲು ಸರ್ಕಾರಕ್ಕೆ ಪ್ರಸ್ಥಾವನೆ ಕಳುಹಿಸಲಾಗುವುದು ಎಂದು ಸಚಿವರು ಹೇಳಿದರು.


ಫಾರ್ಮಿಂಗ್ ಸೊಸೈಟಿಯ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರು, ತಮ್ಮ ಸಾಗುವಳಿ ಜಮೀನನ್ನು ತಮಗೆ ಮಂಜೂರಾತಿ ಮಾಡಿಕೊಡಲು ಬಹುದಿನಗಳಿಂದ ಮನವಿ ಮಾಡುತ್ತಿದ್ದಾರೆ. ಸಾಗುವಳಿದಾರ ರೈತರಿಗೆ ಅನ್ಯಾಯವಾಗದಂತೆ ಕ್ರಮವಹಿಸಿ ಸರ್ಕಾರದ ನಿಯಮಾವಳಿ ಅನುಸಾರ ಗರಿಷ್ಟ ಮಂಜೂರಾತಿ ಮಾಡಬಹುದಾದ ಮತ್ತು ಈಗಾಗಲೇ ಸಾಗುವಳಿ ಮಾಡುತ್ತಿರುವ ರೈತರಿಗೆ ಆ ಜಮೀನು ಮಂಜೂರಾತಿ ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆನೆ ಮತ್ತು ರೈತರಿಗೆ ನ್ಯಾಯ ಒದಗಿಸುತ್ತೆನೆ ಎಂದು ಸಚಿವರು ತಿಳಿಸಿದರು.


ಉಪ ವಿಭಾಗಾಧಿಕಾರಿ ಅಶೋಕ ತೆಲಿ ಅವರು ಮಾತನಾಡಿ, ಮೂರು ತಾಲೂಕಿನ ಫಾರ್ಮಿಂಗ್ ಸೊಸೈಟಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಯಾವುದೇ ತೊಂದರೆ ಇಲ್ಲ. ಸಚಿವರು ರೈತರ ಈ ಸಮಸ್ಯೆ ಬಗೆಹರಿಸುವ ಕುರಿತು ಆಸಕ್ತಿ ವಹಿದ್ದು, ಆದಷ್ಟು ಬೇಗ ರೈತರ ಈ ಸಮಸ್ಯೆ ಮುಕ್ತಾಯವಾಗಲಿದೆ ಎಂದು ರೈತರಿಗೆ ತಿಳಿಸಿದರು.


ಇದನ್ನೂ ಓದಿ: ಹೆಚ್‌ ಎನ್‌ ವ್ಯಾಲಿ ನೀರಿನ ಮೂರನೇ ಹಂತದ ಶುದ್ದೀಕರಣದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ: ಸಚಿವ ಎನ್‌.ಎಸ್‌ ಭೋಸರಾಜು


ಸಭೆಯಲ್ಲಿ ಸಹಕಾರ ಸಂಘಗಳ ಧಾರವಾಡ ಜಿಲ್ಲಾ ಉಪನಿಬಂಧಕರು, ಅಳ್ನಾವರ ತಹಶೀಲ್ದಾರ ಬಸವರಾಜ ಬೆಣ್ಣೆಶಿರೂರ, ಕಲಘಟಗಿ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣನವರ, ಧಾರವಾಡ ತಹಶೀಲ್ದಾರ ಕಚೇರಿಯ ಗ್ರೇಡ್-2 ತಹಶೀಲ್ದಾರ ಹಣಮಂತ ಕೊಚ್ಚರಗಿ, ಶೀರಸ್ತೆದಾರ ಮಂಜುನಾಥ ಗುಳಪ್ಪನ್ನವರ, ಧಾರವಾಡ ವೃತ್ತದ ಕಂದಾಯ ನಿರೀಕ್ಷಕ ಗುರು ಸುಣಗಾರ, ಪ್ರಕರಣಗಳ ನಿರ್ವಾಹಕಿ ರಂಜಿತಾ ಹಿರೇಮಠ, ಭೂದಾಖಲೆಗಳ ಇಲಾಖೆಯ ಧಾರವಾಡ ಮತ್ತು ಅಳ್ನಾವರ ಸಹಾಯಕ ನಿರ್ದೇಶಕ ರಾಜಶೇಖರ ಹಳ್ಳೂರ, ಕಲಘಟಗಿ ಸಹಾಯಕ ನಿರ್ದೇಶಕ ಎಸ್.ಸಿ.ಕುಲರ್ಕಣಿ ಮತ್ತು ಧಾರವಾಡ, ಅಳ್ನಾವರ, ಕಲಘಟಗಿ ತಾಲೂಕುಗಳ ಫಾರ್ಮಿಂಗ್ ಸೊಸೈಟಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸಂಬಂದಪಟ್ಟ ಜಮೀನುಗಳ ರೈತರು, ಸಾಗುವಳಿದಾರರು, ಸಂಬಂಧಪಟ್ಟ ಗ್ರಾಮಗಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು, ಸಾರ್ವಜನಿಕರು ಭಾಗವಹಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.