ಬೆಂಗಳೂರು : ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು.ಆದರೆ  ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಸರ್ಕಾರದ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ :ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಅನುದಾನ ಅನ್ಯಾಯವಾಗಿಲ್ಲ


ಈಗಾಗಲೇ ಕೆ ಎಫ್ ಡಿಗೆ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಇದಕ್ಕೆ ಇಲಾಖೆಯ ನಿರ್ಲಕ್ಷ್ಯವೇ ಕಾರಣ. ಹೀಗಾಗಿ ಸಾವಿನ ನೈತಿಕ ಹೊಣೆ ಹೊತ್ತು ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಆ ಕುಟುಂಬದ ಒಬ್ಬ ವ್ಯಕ್ತಿಗೆ  ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.


ರೋಗ ಹರಡುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾದ ಮತ್ತು ಎರಡು ಸಾವು ಸಂಭವಿಸಿದ ಬಳಿಕ ಸುದೀರ್ಘ ನಿದ್ದೆಯಿಂದ ಎಚ್ಚೆತ್ತ ಆರೋಗ್ಯ ಇಲಾಖೆ  ಮಾರ್ಗಸೂಚಿ ಹೊರಡಿಸಿತು. ಆ ಬಳಿಕವಷ್ಟೇ ಹಿರಿಯ ಅಧಿಕಾರಿಗಳು ಶಿವಮೊಗ್ಗಕ್ಕೆ ಧಾವಿಸಿ ಸಭೆ ನಡೆಸುವ ಶಾಸ್ತ್ರ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ : ಜೀ ಕನ್ನಡ ಸ್ಟುಡಿಯೋದಲ್ಲಿ ಕಣ್ಣು ಮುಚ್ಚಿ ಓದುವ ಕಲೆ ಸತ್ಯವನ್ನು ಲೈವ್‌ ಟೆಸ್ಟ್‌ನಲ್ಲೇ ನೋಡಿ!


ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣಕನ್ನಡ, ಚಿಕ್ಕಮಗಳೂರು ಮತ್ತು ಉಡುಪಿ ಮತ್ತು ಬೆಳಗಾವಿಯ ಕೆಲ ಪ್ರದೇಶಗಳಲ್ಲಿ ಬೇಸಿಗೆ ಸಂದರ್ಭದಲ್ಲಿ ಮಂಗನಕಾಯಿಲೆ ಕಾಣಿಸಿಕೊಳ್ಳುವುದು ವಾಡಿಕೆ. ಕಳೆದ 66 ವರ್ಷಗಳಿಂದ ಈ ರೋಗ ಕಾಡುತ್ತಿದೆ. ಇದು ಗೊತ್ತಿದ್ದರೂ ಇಲಾಖೆ ಕಾಲಾಹರಣ ಮಾಡಿದೆ. ಇದರಿಂದಾಗಿಯೇ ಇವತ್ತು ಆತಂಕಕಾರಿ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಈ ಕೂಡಲೇ ಇಲಾಖೆ ವತಿಯಿಂದ ಆಂದೋಲನದ ಮಾದರಿಯಲ್ಲಿ ಮನೆ ಮನೆಗೆ ಲಸಿಕೆ ನೀಡಬೇಕು. ಸಂಶೋಧನಾ ಸಂಸ್ಥೆ ಮತ್ತು ಉತ್ಪಾದನಾ ಕಂಪನಿಗಳ ಜತೆ ಸಮಾಲೋಚನೆ ನಡೆಸಿ ರೋಗಕ್ಕೆ ಕಾರಣವಾಗಿರುವ ವೈರಸ್ ನಲ್ಲಿ ಆಗಿರುವ ಬದಲಾವಣೆಗೆ ಅನುಗುಣವಾಗಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವ ಲಸಿಕೆ ಕಂಡು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಆ ಲಸಿಕೆ ದೀರ್ಘ ಕಾಲ ಕಾರ್ಯ ನಿರ್ವಹಿಸುವಂತಿರಬೇಕು ಎಂದು ಆಗ್ರಹಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.