ಬೆಂಗಳೂರು : ರಾಜ್ಯ ಸರ್ಕಾರ ಬಡವರಿಗೆ ಮರಳಿ ಬಿಪಿಎಲ್‌ ಕಾರ್ಡ್‌ ನೀಡಬೇಕು. ಕಾರ್ಡ್‌ ರದ್ದು ಪ್ರಕ್ರಿಯೆ ನಿಲ್ಲಿಸದಿದ್ದರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್  ಎಚ್ಚರಿಕೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವೃಷಭಾವತಿ ನಗರ, ನಂದಿನಿ ಲೇಔಟ್ ಗಳಲ್ಲಿ ಬಿಪಿಎಲ್‌ ಕಾರ್ಡ್‌ ರದ್ದುಗೊಂಡ ಕುಟುಂಬದವರನ್ನು ಶಾಸಕರಾದ ಡಾ. ಅಶ್ವತ್ಥನಾರಾಯಣ ಮತ್ತು ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ಮಾಡಿ ಸಮಸ್ಯೆ ಆಲಿಸಿದರು. 


ಇದನ್ನೂ ಓದಿ : ಬಳ್ಳಾರಿ ಜಿಲ್ಲೆಯಾಧ್ಯಂತ ಸುರಿದ ಅಕಾಲಿಕ ಮಳೆಗೆ ರೈತರು ಕಂಗಾಲು


ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ. 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್‌ ಕೆಲಸಕ್ಕೆ ಹೋಗಲು ಆಗುತ್ತಿಲ್ಲ. ಅಂಗವಿಕಲ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ. ಇಂತಹ ಬಡ ಕುಟುಂಬದ ಜನರ ಮನೆಗೆ ಸಿಎಂ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದು ದೂರಿದರು. 


14 ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ. ಬ್ಯಾಂಕಿನಲ್ಲಿ ಸಾಲ ಕೇಳಲು ಕೂಡಾ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ. ಇದನ್ನು ಅರಿಯದೆ ಕಾಂಗ್ರೆಸ್‌ ಸರ್ಕಾರ, ಮನೆಗೆ ಭೇಟಿ ನೀಡದೆ ರೇಷನ್‌ ಕಾರ್ಡ್‌ಗಳನ್ನು ರದ್ದುಪಡಿಸಿದೆ. ಈಗ 11 ಲಕ್ಷ ಕಾರ್ಡ್‌ ರದ್ದುಪಡಿಸಿದ್ದು, ಇನ್ನೂ 14 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 


ಇದನ್ನೂ ಓದಿ : ಅನರ್ಹ ಕಾರ್ಡ್ ಹೊಂದಿದ್ದರೆ ಡಿಲಿಟ್ ಆಗಲಿದೆ


ಕಾಂಗ್ರೆಸ್‌ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ. ಇರುವ ಹಣವನ್ನು ಲಂಚಕ್ಕೆ ಬಳಸಲಾಗುತ್ತಿದೆ. ಶಾಸಕರು ಸರ್ಕಾರದ ಕತ್ತುಪಟ್ಟಿ ಹಿಡಿದಿದ್ದಾರೆ. ಅನುದಾನ ಸಿಗದ ಬಗ್ಗೆ ಕಾಂಗ್ರೆಸ್‌ ಶಾಸಕರೇ ದೂರು ಹೇಳುತ್ತಿದ್ದಾರೆ. 25 ಲಕ್ಷ ಕಾರ್ಡ್‌ ರದ್ದುಪಡಿಸಿದರೆ 20,000 ಕೋಟಿ ರೂ. ಬರಬಹುದು. ಆ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು. ಇದು ಕಾರ್ಡ್‌ ರದ್ದು ಮಾಡುವುದರ ಹಿಂದಿನ ಉದ್ದೇಶ ಎಂದು ಹೇಳಿದ್ದಾರೆ.  


ಉಚಿತ ಬಸ್‌ ಯೋಜನೆ ರದ್ದು ಮಾಡುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಮುಂದೆ ಉಚಿತ ವಿದ್ಯುತ್‌ ಯೋಜನೆ ಕೂಡ ರದ್ದಾಗಲಿದೆ. ಶಾಸಕರು ಅನುದಾನವಿಲ್ಲದೆ ದಂಗೆ ಏಳುವ ಸ್ಥಿತಿಗೆ ಹೋಗಿದ್ದಾರೆ. ಇದಕ್ಕಾಗಿ ಬಡವರ ಅನ್ನ ಕಿತ್ತಿರುವ ಕಾಂಗ್ರೆಸ್‌ ನರಕಕ್ಕೆ ಹೋಗುವುದು ಗ್ಯಾರಂಟಿ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.