ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗ ಹಿಡಿದಿರುವುದು ಅಂಬೇಡ್ಕರ್ ವ್ಯಸನ ಅಲ್ಲ, ಅಧಿಕಾರದ ವ್ಯಸನ. ಆತ್ಮವಂಚನೆ ಮಾಡಿಕೊಂಡರೂ ಪರವಾಗಿಲ್ಲವೆಂದು ಅಧಿಕಾರ ಅನುಭವಿಸುವ ಕೆಟ್ಟ ವ್ಯಸನ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.
ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಏನು ದ್ರೋಹ ಬಗೆದಿದೆ ಎಂದು ಇಡೀ ದೇಶಕ್ಕೆ ಗೊತ್ತು. ಸಿದ್ದರಾಮಯ್ಯನವರಿಗೂ ಗೊತ್ತು. ಸಿಎಂ ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ ಮೊದಲು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬಂದು ಆಮೇಲೆ ಅಂಬೇಡ್ಕರ್ ಅವರ ಬಗ್ಗೆ ಮಾತಾಡಲಿ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಮಾನ, ಮರ್ಯಾದೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
1920 ರಲ್ಲಿ ಸೈಮನ್ ಆಯೋಗ ಬಂದಿತ್ತು. ಆಗ ಅವರನ್ನು ಭೇಟಿ ಮಾಡಿದ್ದ ಅಂಬೇಡ್ಕರ್, ದಲಿತರಿಗೆ ಮತದಾನದ ಹಕ್ಕು ನೀಡಬೇಕು ಎಂದು ಕೇಳಿದ್ದರು. ಆಗ ಕಾಂಗ್ರೆಸ್ ನಾಯಕರು ಮಧ್ಯಪ್ರವೇಶ ಮಾಡಿ, ಮತದಾನದ ಹಕ್ಕು ದಲಿತರಿಗೆ ಕೊಡಬೇಡಿ ಎಂದು ಹೇಳಿತ್ತು. ದಲಿತರಿಗೆ ಅರಿವಿನ ಕೊರತೆ ಇದೆ ಎಂದು ಕಾಂಗ್ರೆಸ್ ಹೇಳಿತ್ತು. ದಲಿತರಿಗೆ ಮತದಾನದ ಹಕ್ಕು ಬೇಡ, ದಲಿತರಿಗೆ ಮೀಸಲಾತಿ ಕೊಡುವುದು ಬೇಡ ಎಂದಿದ್ದ ಕಾಂಗ್ರೆಸ್ ಪಕ್ಷದಲ್ಲಿ ಇದ್ದುಕೊಂಡು ಅಂಬೇಡ್ಕರ್ ಅವರ ಬಗ್ಗೆ ಮಾತನಾಡಲು ಸಿಎಂ ಸಿದ್ದರಾಮಯ್ಯನವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸೇರುವುದು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಸಮ ಎಂದು ಅಂಬೇಡ್ಕರ್ ಹೇಳಿದ್ದರು. ಆದರೆ ಈಗ ಸಿದ್ದರಾಮಯ್ಯನವರು ಅಧಿಕಾರಕ್ಕಾಗಿ ಅದೇ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಅಂಬೇಡ್ಕರ್ ಅವರ ಬಗ್ಗೆ ಇನ್ನು ಒಂದೇ ಒಂದು ಮಾತಾಡುವುದಕ್ಕೆ ಮುಂಚೆ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಆಮೇಲೆ ಮಾತಾಡಲಿ. ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷಕ್ಕೆ ತಮ್ಮನ್ನ ತಾವು ಮಾರಿಕೊಂಡು, ಆತ್ಮ ವಂಚನೆ ಮಾಡಿಕೊಂಡ ಸಿದ್ದರಾಮಯ್ಯನವರಿಂದ ಬಿಜೆಪಿ ಪಾಠ ಕಲಿಯಬೇಕಾಗಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ ಹಿನ್ನೆಲೆ, ಸಿ.ಟಿ.ರವಿ ಬಂಧನ
ಸರ್ಕಾರ ಅಂದರೆ ಜನರಿಗೆ ಉತ್ತರದಾಯಿ ಆಗಿರಬೇಕು ಎನ್ನುವ ಉದ್ದೇಶದಿಂದ ಅಂಬೇಡ್ಕರ್ ಸಂವಿಧಾನ ತಂದುಕೊಟ್ಟರು. ಆದರೆ ಇಲ್ಲಿ ಸಂವಿಧಾನದ ಮೇಲೆ ಪ್ರಮಾಣ ವಚನ ತೆಗೆದುಕೊಂಡ ಕಾಂಗ್ರೆಸ್ ಸರ್ಕಾರ ಬೆಳಗಾವಿ ಸದನದಲ್ಲಿ ಉತ್ತರ ಕೊಡದೆ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು ಪಲಾಯನ ಮಾಡುತ್ತಿದೆ. ಇದು ಅಂಬೇಡ್ಕರ್ ಅವರಿಗೆ, ಸಂವಿಧಾನಕ್ಕೆ ಮಾಡುತ್ತಿರುವ ಅಪಚಾರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಡಾ.ಅಂಬೇಡ್ಕರ್ ಅವರು "ಮಹಿಳೆಯರು ಸಾಧಿಸಿದ ಪ್ರಗತಿಯ ಮಟ್ಟದಿಂದ ನಾನು ಸಮುದಾಯದ ಪ್ರಗತಿಯನ್ನು ಅಳೆಯುತ್ತೇನೆ" ಎಂದಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಇಲ್ಲಿ ಒಂದು ಕಡೆ ಅಂಬೇಡ್ಕರ್ ಫೋಟೋ ಹಿಡಿದುಕೊಂಡು ತೋರಿಕೆ ಮಾಡುತ್ತಿದೆ, ಮತ್ತೊಂದು ಕಡೆ ಕಳಪೆ ಔಷಧಿ ಕೊಟ್ಟು ಮಹಿಳೆಯರನ್ನು ಕೊಲ್ಲುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.