ಬೆಂಗಳೂರು : ಬೇಸಿಗೆ ಆರಂಭವಾಗುವ ಮೊದಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂಪಾಯಿ ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಗುಡಿಗಿದರು.


COMMERCIAL BREAK
SCROLL TO CONTINUE READING

ಈ ಕುರಿತು ಟ್ವಿಟ್‌ ಮಾಡಿರುವ ಅವರು, ಇನ್ನೂ ಈ ವರ್ಷದ ಬೇಸಿಗೆ ಕಾಲವೇ ಆರಂಭವಾಗಿಲ್ಲ, ಆದರೆ ಈಗಾಗಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ತಮ್ಮ I.N.D.I ಮೈತ್ರಿಕೂಟದ ಡಿಎಂಕೆ ಪಕ್ಷದ ಜೊತೆ ದೋಸ್ತಿ ಉಳಿಸಿಕೊಳ್ಳಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿದ ನಾಡದ್ರೋಹಿ @INCKarnataka ಸರ್ಕಾರ ಈಗ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂಪಾಯಿ ತೆತ್ತುವ ಪರಿಸ್ಥಿತಿ ತಂದಿಟ್ಟಿದೆ.


ಇದನ್ನೂ ಓದಿ:"ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು"


ಬರ ಪರಿಸ್ಥಿತಿಯಿಂದ ಬೆಂಗಳೂರು ನಗರದಲ್ಲಿ ಉಂಟಾಗಬಹುದಾದ ನೀರಿನ ಸಮಸ್ಯೆ ಬಗ್ಗೆ ಮೊದಲೇ ಅಂದಾಜಿಸಿ ಹೆಚ್ಚುವರಿ ಕೊಳವೆ ಬಾವಿಗಳನ್ನು ಕೊರೆಸಲು, ಹಳೇ ಕೊಳವೆ ಬಾವಿಗಳ ಮರುಪೂರಣ ಮಾಡಲು, ನೀರಿಗಾಗಿ ಪರ್ಯಾಯ ವ್ಯವಸ್ಥೆ ಹುಡುಕಲು ಕ್ರಮ ಕೈಗೊಂಡಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ.


ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಾಯಿಮಾತಿಗೆ ಘೋಷಣೆ ಮಾಡಿ ಆಡಳಿತದ ಚುಕ್ಕಾಣಿಯನ್ನು ಸಂಪೂರ್ಣವಾಗಿ ಅಧಿಕಾರಿಗಳಿಗೆ ಕೊಟ್ಟು ಕಾಂಗ್ರೆಸ್ ನಾಯಕರು ಸದಾ ತಮ್ಮ ಕುರ್ಚಿ ಉಳಿಸಿಕೊಳ್ಳಲು, ಪಕ್ಕದ ರಾಜ್ಯಗಳ ಚುನಾವಣೆ ಉಸಾಬರಿ ನೋಡಿಕೊಳ್ಳಲು ಕಾಲಹರಣ ಮಾಡುತ್ತಾ ಬೆಂಗಳೂರನ್ನ ಸಂಪೂರ್ಣವಾಗಿ ನಿರ್ಲಕ್ಷ ಮಾಡಿದ ಪರಿಣಾಮ ಇವತ್ತು ಬೆಂಗಳೂರಿನ ಜನರು ಹನಿ ನೀರಿಗೂ ಪರದಾಡುವ ದುಸ್ಥಿತಿ ಬಂದಿದೆ.


ಇದನ್ನೂ ಓದಿ:ಪಿಯುಸಿ-ಸಿಇಟಿ/ನೀಟ್ ಪರೀಕ್ಷೆಗಳಿಗೆ ತರಬೇತಿ


ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಈಗಲಾದರೂ ಎಚ್ಚೆತ್ತುಕೊಂಡು ಅಧಿಕಾರಿಗಳ ಸಭೆ ಕರೆದು ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು. ರಾಜಕಾರಣ ಬಿಟ್ಟು ಜನಕಾರಣದತ್ತ ಗಮನ ಹರಿಸಿ ಬೆಂಗಳೂರಿನ ಜನತೆಗೆ ಕನಿಷ್ಠ ಪಕ್ಷ ಕುಡಿಯುವ ನೀರಿನ ಗ್ಯಾರೆಂಟಿ ಆದರೂ ಕೊಡಬೇಕು ಎಂದು ಅಶೋಕ್‌ ಆಗ್ರಹಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.