ಬೆಂಗಳೂರು : ಅಲ್ಪಸಂಖ್ಯಾತರ ಬಡಾವಣೆಗಳ ಸುಧಾರಣೆಗೆ 11 ಸಾವಿರ ಕೋಟಿ ರೂಪಾಯಿ ನೀಡುವುದಾಗಿ ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು ಸುಲ್ತಾನ ಮಾಡಿದಂತೆಯೇ ಹಿಂದೂ-ಮುಸ್ಲಿಮರನ್ನು ಬೇರೆ ಮಾಡುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಒಂದೇ ವಾರದಲ್ಲಿ ಪ್ರತಿ ರೈತರಿಗೆ 2 ಸಾವಿರ ರೂ. ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ವಾಸ್ತವವಾಗಿ ಪ್ರತಿಯೊಬ್ಬರಿಗೆ 30-40 ಸಾವಿರ ರೂ.‌ ಕೊಡಬೇಕಿತ್ತು. ಇವರಿಗೆ ಅಷ್ಟು ಹಣ ನೀಡಲು ಕೂಡ ಯೋಗ್ಯತೆ ಇಲ್ಲ. ಬೆಳಗಾವಿ ಅಧಿವೇಶನದಲ್ಲಿ ವಿರೋಧ ಬರುತ್ತದೆಂದು 2 ಸಾವಿರ ರೂ. ಘೋಷಿಸಿದ್ದರು. ಅದನ್ನು ಕೊಡುವ ಯೋಗ್ಯತೆ ಇಲ್ಲದವರು ಮಾನ ಮರ್ಯಾದೆ ಇಲ್ಲದೆ 11 ಸಾವಿರ ಕೋಟಿ ರೂಪಾಯಿಯನ್ನು ಅಲ್ಪಸಂಖ್ಯಾತರ ಬಡಾವಣೆಗೆ ಖರ್ಚು ಮಾಡುತ್ತೇನೆ ಎಂದು ಹೇಳುತ್ತಾರೆ ಎಂದು ದೂರಿದರು.


ಇದನ್ನೂ ಓದಿ:ಸ್ವಪಕ್ಷದವರ ವಿರುದ್ಧವೇ ಸಮರ ಸಾರಿರುವ ಯತ್ನಾಳ್ ವಿರುದ್ಧ ಜೋಶಿ ಕಿಡಿ..!


ಹಿಂದೆ ಟಿಪ್ಪು ಸುಲ್ತಾನ ಹಿಂದೂ ಮುಸ್ಲಿಮರನ್ನು ಬೇರೆ ಮಾಡಿದಂತೆ ಸಿಎಂ ಸಿದ್ದರಾಮಯ್ಯನವರು ಈಗ ಮಾಡುತ್ತಿದ್ದಾರೆ. ಮುಸ್ಲಿಮರ ಕಾಲೋನಿ ಬೇರೆ, ಹಿಂದೂಗಳ ಪ್ರದೇಶ ಬೇರೆ ಎಂದು ವರ್ಗೀಕರಣ ಮಾಡಿ ಸಂವಿಧಾನಕ್ಕೆ ಅಪಚಾರವಸೆಗಿದ್ದಾರೆ‌ ಎಂದು ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ನೀಡುತ್ತಿದ್ದರೆ, ಬರಗಾಲದಿಂದ ನೊಂದ ರೈತರಿಗೆ ನೇಣಿನ ಕುಣಿಕೆ ನೀಡಿದೆ. ಸಾಲ ತೀರಿಸಲಾಗದೆ ಕಳೆದ ಏಳು ತಿಂಗಳಲ್ಲಿ 500 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟಿದ್ದರೂ ಅಲ್ಪಸಂಖ್ಯಾತರಿಗೆ ಬಂಪರ್ ಮೇಲೆ ಬಂಪರ್ ಕಾಣಿಕೆ ನೀಡುತ್ತಿದ್ದಾರೆ. ಈ ಹಿಂದೆ 10 ಸಾವಿರ ಕೋಟಿ ರೂಪಾಯಿ ಎಂದು ಘೋಷಣೆ ಮಾಡಿದ್ದರು. ಈಗ 1 ಸಾವಿರ ಕೋಟಿ ರೂ. ಸೇರಿ 11 ಸಾವಿರ ಕೋಟಿ ರೂಪಾಯಿ ಆಗಿದೆ ಎಂದರು.


ರಾಜ್ಯದಲ್ಲಿ ಅಭಿವೃದ್ಧಿಗೆ ಸಿಗುವುದೇ 50 ರಿಂದ 60 ಸಾವಿರ ಕೋಟಿ ರೂ. ಉಳಿದಿದ್ದು ವೆಚ್ಚಗಳಿಗೆ ಹೋಗುತ್ತದೆ. ಅದರಲ್ಲಿ 11 ಸಾವಿರ ಕೋಟಿ ರೂಪಾಯಿಯನ್ನು ಅಲ್ಪಸಂಖ್ಯಾತರ ಪ್ರದೇಶಗಳಿಗೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದೂಗಳ ಕಾಲೋನಿ ಎರಡನೇ ದರ್ಜೆಯದ್ದಾ? ದಲಿತರು ಇರುವ ಕಾಲೋನಿಗಳ ಪಾಡು ಏನು? ಎಂದು ಪ್ರಶ್ನೆ ಮಾಡಿದರು. ಸಿಎಂ ಸಿದ್ದರಾಮಯ್ಯ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಮುಸಲ್ಮಾನರನ್ನು ಓಲೈಕೆ ಮಾಡುವ ಪ್ರವೃತ್ತಿ ಅವರಿಗೆ ಕರಗತವಾಗಿದೆ. ಟಿಪ್ಪು ಸಂಸ್ಕೃತಿಯನ್ನು ಹೇರುವ ಕೆಲಸ ಮಾಡುತ್ತಿದ್ದಾರೆ. ಒಂದೇ ಒಂದು ಅಭಿವೃದ್ಧಿ ಯೋಜನೆಯ  ಅಡಿಗಲ್ಲು ಹಾಕಿಲ್ಲವೆಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ. ಸರ್ಕಾರ ರೈತರ ತಲೆಯ ಮೇಲೆ ಕಲ್ಲು ಹಾಕಿದೆ ಎಂದು ದೂರಿದರು.


ಇದನ್ನೂ ಓದಿ:"ಕೇಂದ್ರ ಸರ್ಕಾರವು ರಾಜ್ಯದ ಜನರ ನೆರವಿಗೆ ಬರದಿದ್ದರೂ ನಾವು ರಾಜ್ಯದ ಜನರ ಕೈ ಬಿಡುವುದಿಲ್ಲ"


ಏಳು ತಿಂಗಳಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹಿಂದಿನ ಸರ್ಕಾರದ ಯೋಜನೆಗಳ ಅನುದಾನ ಸ್ಥಗಿತಗೊಂಡಿದೆ. ಆದರೂ ಓಲೈಕೆ ರಾಜಕಾರಣ ನಡೆಯುತ್ತಿದೆ. ಪಿಎಫ್ಐ ಮೊದಲಾದ ಸಂಘಟನೆಗಳ ಮೇಲಿದ್ದ 135 ಪ್ರಕರಣಗಳನ್ನು ವಾಪಸು ಪಡೆಯಲಾಗಿದೆ. ಕೆಜಿ ಹಳ್ಳಿ, ಡಿಜೆ ಹಳ್ಳಿ ಘಟನೆ ಕುರಿತು ಮುಸ್ಲಿಮ್ ಶಾಸಕರು ಪತ್ರ ಬರೆದಾಗ ಸರ್ಕಾರ ಬಹಳ ಮುತುವರ್ಜಿ ವಹಿಸಿ ಕಡತವನ್ನು ಕಳುಹಿಸಿದೆ. ಕುಕ್ಕರ್ ಬಾಂಬ್ ಸ್ಫೋಟವಾದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನ ಬ್ರದರ್ ಎಂದು ಹೇಳಿದ್ದರು. ಶಿವಮೊಗ್ಗದ ಘಟನೆಯಾದಾಗ ಆರೋಪಿಗಳೆಲ್ಲ ಅಮಾಯಕರು, ಬಂಧಿಸಬೇಡಿ ಎಂದು ಗೃಹ ಸಚಿವರು ಹೇಳಿದ್ದರು. ಇವನ್ನೆಲ್ಲ ನೋಡುತ್ತಿದ್ದರೆ ಯಾವ ದೇಶದಲ್ಲಿದ್ದೇವೆ ಎಂದು ಅರ್ಥವಾಗುವುದಿಲ್ಲ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಎಲ್ಲ ಧರ್ಮದವರನ್ನು ಒಂದಾಗಿ ಕರೆದೊಯ್ಯುತ್ತೇನೆ ಎನ್ನುತ್ತಾರೆ. ಈಗ ಅದಕ್ಕೆ ಅಪವಾದವಾಗಿ ಕೆಲಸ ಮಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ನಾಮ ಹಾಕಿದ ಸಚಿವರು : ಶಿಕ್ಷಣ ಸಚಿವರು ಚೆಕ್ ಬೌನ್ಸ್ ಮಾಡಿ ಯಾರಿಗೋ ನಾಮ ಹಾಕಿದ್ದಾರೆ. ಕೋರ್ಟ್ ಆದೇಶ ಬಂದ ನಂತರವೂ ಆ ಸಚಿವರ ರಾಜೀನಾಮೆ ಪಡೆಯದೆ ಮುಖ್ಯಮಂತ್ರಿಯವರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಅವರ ರಾಜೀನಾಮೆ ಪಡೆಯಬೇಕೆಂದು ಆರ್.ಅಶೋಕ ಆಗ್ರಹಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.