ಮೈಸೂರು : ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.


COMMERCIAL BREAK
SCROLL TO CONTINUE READING

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜೊತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು. ಅಲ್ಲದೆ, ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.


ಇದನ್ನೂ ಓದಿ: ಅಂಜಲಿ ಕೊಲೆಗೆ ಪೊಲೀಸರೇ ಕಾರಣ, ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕೆ ಬಳಕೆ: ಬಸವರಾಜ ಬೊಮ್ಮಾಯಿ


ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ.ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.


ವಿದ್ಯಾವಂತ ಮತದಾರರು : ಈಗ ವಿಧಾನಪರಿಷತ್ ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.