ಯತೀಂದ್ರ ಸಿದ್ದರಾಮಯ್ಯ ಅಪ್ರಬುದ್ಧ ಹೇಳಿಕೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು: ಆರ್‌.ಅಶೋಕ್ ಎಚ್ಚರಿಕೆ

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ.ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪಿಸಿದ್ದಾರೆ.

Written by - Ranjitha R K | Last Updated : Mar 29, 2024, 02:45 PM IST
  • ಯತೀಂದ್ರ ಅವರಿಗೂ ಜೈಲಿಗೆ ಹೋಗುವ ಸ್ಥಿತಿ ಬರಲಿದೆ
  • ಕಾಂಗ್ರೆಸ್‌ನದ್ದು ಗೂಂಡಾ ಸಂಸ್ಕೃತಿ - ಆರ್ ಅಶೋಕ್
  • ಕಾಂಗ್ರೆಸ್ ವಿರುದ್ದ ಆರ್ ಅಶೋಕ್ ಆಕ್ರೋಶ
ಯತೀಂದ್ರ ಸಿದ್ದರಾಮಯ್ಯ ಅಪ್ರಬುದ್ಧ ಹೇಳಿಕೆ ವಿರುದ್ದ ಚುನಾವಣಾ ಆಯೋಗಕ್ಕೆ ದೂರು: ಆರ್‌.ಅಶೋಕ್ ಎಚ್ಚರಿಕೆ  title=

ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಎಚ್ಚರಿಕೆ ನೀಡಿದರು. 

ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ.ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಈ ರೀತಿ ಮಾತನಾಡಿದ್ದಾರೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ರಾಜೀನಾಮೆ ಪ್ರಹಸನ ಆಶ್ಚರ್ಯ ತಂದಿದೆ :ಹೈಕಮಾಂಡ್ ನಿರ್ಧಾರಕ್ಕೆ ಬದ್ದ -ಕೆ.ಹೆಚ್ ಮುನಿಯಪ್ಪ

ಮೈಸೂರಿನ ರಾಜಕಾರಣದ ಬಗ್ಗೆ ಮಾತನಾಡಲು ಯತೀಂದ್ರ ಅವರಿಗೆ ಯೋಗ್ಯತೆ ಇಲ್ಲ.ಅಲ್ಲಿನ ರಾಜಕಾರಣ ಬಿಟ್ಟು ಕೇಂದ್ರದ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ಇಂತಹ ಬಾಲಿಶ ಹಾಗೂ ಕೊಬ್ಬಿನ ಹೇಳಿಕೆ ನೀಡುವುದು ಕಾಂಗ್ರೆಸ್ಸಿನ ಡಿಎನ್‌ಎ ನಲ್ಲೇ ಇದೆ. ಈಗಾಗಲೇ ರಾಹುಲ್‌ ಗಾಂಧಿ ಬಾಲಿಶ ಹೇಳಿಕೆ ನೀಡಿ ಜೈಲಿಗೆ ಹೋಗುವ ಸ್ಥಿತಿ ಬಂದಿದೆ. ಯತೀಂದ್ರ ಅವರೂ ಹೀಗೆ ಮಾತನಾಡುತ್ತಿದ್ದರೆ ಕೊನೆಗೆ ಜೈಲೇ ಗತಿಯಾಗಲಿದೆ ಎಂದಿದ್ದಾರೆ. 

ಯತೀಂದ್ರ ಅವರಿಗೆ ತಮ್ಮ ತಂದೆಯ ಗೂಂಡಾಗಿರಿ ಕಣ್ಣಿಗೆ ಕಾಣುವುದಿಲ್ಲ. ರಾಜ್ಯದಲ್ಲೀಗ ಅಪ್ಪ-ಮಕ್ಕಳ ಗೂಂಡಾಗಿರಿ ಜಾರಿಯಲ್ಲಿದೆ.ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ಆದರೆ ಇವರು ನಡೆಸುವುದು ರಾವಣ ರಾಜ್ಯ.ಯತಿ ಎಂದರೆ ಸನ್ಯಾಸಿ. ಆದರೆ ಇವರ ಬಾಯಲ್ಲಿ ಬರುವ ಮಾತು ರಾಕ್ಷಸನಂತಿದೆ. ಇವರ ಹೆಸರಿಗೂ ಮಾತಿಗೂ ಸಂಬಂಧವೇ ಇಲ್ಲ ಎಂಡು ಹೇಳಿದ್ದಾರೆ.  

ಇದನ್ನೂ ಓದಿ : Bengaluru-Tumkur Metro : ತುಮಕೂರು-ಬೆಂಗಳೂರು ಮೆಟ್ರೋ ಅಪ್‌ಡೇಟ್‌ : 52.41 ಕಿ.ಮೀ ನಲ್ಲಿ 19 ನಿಲ್ದಾಣಗಳು

ಬಿಜೆಪಿ-ಜೆಡಿಎಸ್‌ ಹಾಲು ಜೇನಿನಂತೆ ಕೆಲಸ ಮಾಡುತ್ತಿದೆ.ಇನ್ನಷ್ಟು ಚೆನ್ನಾಗಿ ಕಾರ್ಯನಿರ್ವಹಿಸಲು ಸಮನ್ವಯ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸಭೆ ನಡೆಸಲಾಗುವುದು.ರೈತರಿಗೆ ಪರಿಹಾರ ಕೊಡದ, ಕುಡಿಯುವ ನೀರು ಕೊಡದ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಿದೆ.ಇಂಥಹ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಬೇಕು ಎಂದು ಮನವಿ ಮಾಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News