ಬೆಳಗಾವಿ: ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಪರಿಹಾರ ನೀಡಲು ಮೀನಾ ಮೇಷ ಎಣಿಸುವ ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆಗೆ ಹತ್ತು ಸಾವಿರ ಕೋಟಿ ಅನುದಾನ ನೀಡುವುದಾಗಿ ಹೇಳಿರುವುದು ತುಷ್ಟೀಕರಣದ ಪರಮಾವಧಿ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ವಿಧಾನಸಭೆ ಕಲಾಪದ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ಇಂತಹ ರೈತ ವಿರೋಧಿ ಸರಕಾರವನ್ನು ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿಡಸೋಶಿ ಗ್ರಾಮದ ಯುವ ರೈತ ಶಿವಪ್ಪ ಶಿವಲಿಂಗ ಎಂಬಾತ ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆ ಬಗ್ಗೆ ಸರಕಾರಕ್ಕೆ ಕಿಂಚಿತ್ತೂ ಕಾಳಜಿಯಿಲ್ಲ. ಅಧಿವೇಶನ ಆರಂಭದ ದಿನ ದುರಂತ ನಡೆದಿದ್ದು ಇಡೀ ಸರಕಾರಿ ಆಡಳಿತ ಬೆಳಗಾವಿಯಲ್ಲಿ ಇದ್ದರೂ ಯಾರೊಬ್ಬರೂ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.


ಇದನ್ನೂ ಓದಿ: ವಿಮಾ ಪರಿಹಾರ ನೀಡದ ಜೀವ ವಿಮಾ ನಿಗಮಕ್ಕೆ ರೂ.6 ಲಕ್ಷಕ್ಕೂ ಅಧಿಕ ದಂಡ ವಿಧಿಸಿದ ಕೋರ್ಟ್


ಮುಂಗಾರು ವೈಫಲ್ಯದ ಬೆನ್ನಲ್ಲೇ ಹಿಂಗಾರು ಕೈಕೊಟ್ಟಿದೆ. ಈ ಬಗ್ಗೆ ಯಾವುದೇ ಸಚಿವ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಮೌಲ್ವಿಗಳ ಕಾರ್ಯಕ್ರಮದಲ್ಲಿ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ನೀಡುವ ಅನುದಾನವನ್ನು ಹತ್ತು ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸುವುದಾಗಿ ಹೇಳಿದ್ದಾರೆ. ಇವರಿಗೆ ಸಾಯುತ್ತಿರುವ ರೈತರು ಕಣ್ಣಿಗೆ ಕಾಣುತ್ತಿಲ್ಲವೇ ಎಂದು ಕಿಡಿಕಾರಿದರು.


ನಿಷ್ಕ್ರಿಯ ಸರಕಾರ : ಈ ಸರ್ಕಾರದ ಪಂಚೇದ್ರಿಯಗಳು ನಿಷ್ಕ್ರಿಯ ಗೊಂಡಂತಿದೆ. ರೈತರು, ಕೂಲಿ ಕಾರ್ಮಿಕರ ಸಂಕಷ್ಟದ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಬರದಿಂದ ಅಸಹಾಯಕ ರಾಗಿ ನೆರವಿನತ್ತ ನೋಡುತ್ತಿರುವವರನ್ನು ನಡು ದಾರಿಯಲ್ಲಿ ಕೈ ಬಿಟ್ಟಿದೆ ಎಂದು ಕಲಾಪದ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.


ಇದನ್ನೂ ಓದಿ: ಡಾ.ಬಿ.ಆರ್.ಅಂಬೇಡ್ಕರ್ ಪರಿ ನಿರ್ವಹಣಾ ದಿನಾಚರಣೆ: ಭಾವಚಿತ್ರಕ್ಕೆ ಗಣ್ಯರಿಂದ ಪುಷ್ಪ ನಮನ


ಬರಪರಿಹಾರದ ವಿಷಯ ಬಂದರೂ ಕೇಂದ್ರದತ್ತ ಬೊಟ್ಟು ಮಾಡುತ್ತಾರೆ. ಕೊಬ್ಬರಿ ಬೆಳೆಗಾರರ ನೆರವಿಗೆ ಮುಂದಾಗಿ ಎಂದರೂ ನಫೆಡ್ ಖರೀದಿಸಲಿ ಎನ್ನುತ್ತಾರೆ. ಎಲ್ಲವನ್ನೂ ಕೇಂದ್ರವೇ ಮಾಡಬೇಕು ಎಂದಾದರೆ ಇವರ ಪಾತ್ರ ಏನು? ಸಂಕಷ್ಟದಲ್ಲಿರುವ ಜನತೆಗೆ ಕಿಂಚಿತ್ತೂ ಸಹಾಯ ಮಾಡಬೇಕು ಎಂಬ ಮಾನವಿಯತೆ ಇಲ್ಲದ ಕಟುಕ ಸರಕಾರ ಎಂದು ಕಿಡಿ ಕಾರಿದರು.


ನಮ್ಮ ತಾಳ್ಮೆಗೂ ಒಂದು ಮಿತಿಯಿದೆ. ಬೆಳಗಾವಿ ಅಧಿವೇಶನದಲ್ಲಿ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರಕಾರ ಮುಂದಾಗಬೇಕು ಇಲ್ಲವಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ನುಣುಚಿಕೊಳ್ಳಬೇಡಿ  : ಕೇಂದ್ರದ ನೆರವು ಯಾವುದೇ ಕಾರಣಕ್ಕೂ ಮಿಸ್ ಆಗುವುದಿಲ್ಲ. ಸಂಬಂಧಿಸಿದ ಸಚಿವಾಲಯಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಹಣ ಬಿಡುಗಡೆ ಆಗುತ್ತದೆ. ಅಲ್ಲಿಯವರೆಗೆ ಕಾಲಾ ಹರಣ ಮಾಡದೆ ರಾಜ್ಯ ಸರ್ಕಾರ ನಾವು ಹಿಂದೆ ನೀಡಿದ್ದಂತೆ ಮಾರ್ಗಸೂಚಿಗಿಂತ ಎರಡು ಅಥವಾ ಮೂರು ಪಟ್ಟು ಹೆಚ್ಚಿನ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.