ಬೆಂಗಳೂರು : ಇ ಖಾತಾ ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. 


COMMERCIAL BREAK
SCROLL TO CONTINUE READING

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಇ ಖಾತಾ ಮಾಡುವ ಮುನ್ನ ಮಾಹಿತಿ ಪಡೆಯಬೇಕಿತ್ತು. ಇದಕ್ಕೆ ಬೇಕಾದ ದಾಖಲೆ ಯಾವುದು, ಯಾವ ವಿಭಾಗದಲ್ಲಿ ಎಷ್ಟು ಮಾಡಬಹುದು ಎಂದು ಆಲೋಚಿಸಬೇಕಿತ್ತು. ಏಕಾಏಕಿ ಇ ಖಾತಾ ಮಾಡಿರುವುದರಿಂದ ಜನರಿಗೆ ತೊಂದರೆಯಾಗಿದೆ. ಈಗಾಗಲೇ ಅಪ್‌ಲೋಡ್‌ ಮಾಡಿರುವ ಇ ಖಾತಾಗಳಲ್ಲಿ ಮಾಲೀಕರ ಹೆಸರು, ಭೂಮಿಯ ಅಳತೆಯಲ್ಲಿ ತಪ್ಪಾಗಿದೆ. ಆಸ್ತಿ ವಿವರ ಸರಿಯಾಗಿ ಸಿಗುತ್ತಿಲ್ಲ. ಎನ್‌ಆರ್‌ಐ ಮಾಲೀಕತ್ವದ ಆಸ್ತಿಗೆ ಅಫಿಡವಿಟ್‌ ಮಾಡಬೇಕಿದೆ. ಈ ಯಾವ ಕೆಲಸಗಳೂ ಆಗಿಲ್ಲ ಎಂದರು. 


ಇದನ್ನೂ ಓದಿ: ಸರ್ಕಾರ 108 ಸಿಬ್ಬಂದಿಗಳ ವೇತನ ಬಾಕಿ ಉಳಿಸಿಕೊಂಡಿಲ್ಲ : ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ


ಜನರಿಗೆ ಮನೆ ಸಾಲ ಸಿಗಲು ಇ ಖಾತಾ ಬೇಕಾಗುತ್ತದೆ. ದಿನಕ್ಕೆ 5 ರಿಂದ 6 ರಷ್ಟು ಇ ಖಾತಾ ಮಾಡಲಾಗುತ್ತಿದೆ. ಸರ್ಕಾರ ಲಂಚಕ್ಕೆ ಅವಕಾಶ ನೀಡಿ, ಜನರಿಗೆ ತೊಂದರೆ ನೀಡುತ್ತಿದೆ. ಸರ್ಕಾರ ಕೂಡಲೇ ಈ ವ್ಯವಸ್ಥೆಯನ್ನು ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಇ ಖಾತಾ ವರ್ಗಾವಣೆಯಾಗಬೇಕು. ನಾನು ಕಂದಾಯ ಸಚಿವನಾಗಿದ್ದಾಗ ಶುಲ್ಕ ಕಡಿಮೆ ಮಾಡಿದ್ದೆ. ಈಗಿನ ಸರ್ಕಾರ ಮುದ್ರಾಂಕ ಶುಲ್ಕವನ್ನು 200-250% ಹೆಚ್ಚಿಸಿದೆ. ಜೊತೆಗೆ ಇ ಖಾತಾ ಬರೆ ಬಿದ್ದಿದೆ. ಸರ್ಕಾರ ಈ ಕುರಿತು ಕ್ರಮ ವಹಿಸದಿದ್ದರೆ ಸಾವಿರಾರು ಕೋಟಿ ರೂಪಾಯಿ ಆದಾಯ ನಷ್ಟವಾಗಲಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ