ಯೋಗೇಶ್ವರ್ ಮತ್ತು ರಘುನಂದನ್ ರಾಮಣ್ಣ ನಡುವೆ ಸಂಧಾನ ಯಶಸ್ವಿ!
ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಕರೆಸಿದ ಡಿ ಕೆ ಸುರೇಶ್ ಉಭಯ ನಾಯಕರ ಜೊತೆಗೆ ಮಾತುಕತೆ ನಡೆಸಿದರು
ಬೆಂಗಳೂರು : ಬದಲಾದ ರಾಜಕೀಯ ಪರಿಸ್ಥಿತಿ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು - ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ (BMICAPA) ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ನಡುವೆ ಸಂಧಾನ ನಡೆಡಿದೆ. ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ ಕೆ ಸುರೇಶ್ ಮಧ್ಯಸ್ಥಿಕೆಯಲ್ಲಿ ಈ ಸಂಧಾನ ಯಶಸ್ವಿಯಾಗಿದೆ.
ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಕರೆಸಿದ ಡಿ ಕೆ ಸುರೇಶ್ ಉಭಯ ನಾಯಕರ ಜೊತೆಗೆ ಮಾತುಕತೆ ನಡೆಸಿದರು. ಯೋಗೇಶ್ವರ್ ಅವರ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ತಿಳಿಸಿದ್ದಾರೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಿಪ್ಪು ದೆವ್ವ ಹಿಡಿದಿದೆ: ಪ್ರತಿಪಕ್ಷ ನಾಯಕ ಆರ್ ಅಶೋಕ್
ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು. ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಇದಲ್ಲದೆ ತಾಲೂಕಿನಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 15 ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು.
ಇದಲ್ಲದೆ ಕ್ಷೇತ್ರಕ್ಕೆ ಸರಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳು ಬರುವಲ್ಲಿಯೂ ರಘುನಂದನ್ ರಾಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು. ಈಗ ಇವರು ಯೋಗೇಶ್ವರ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಇದನ್ನೂ ಓದಿ : ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ, ನೋಟಿಸ್ ನೀಡಿದ್ದರೆ ವಾಪಸ್ ಪಡೆಯಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.