ಜ.13ಕ್ಕೆ ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಕರೆದ ರಾಹುಲ್ ಗಾಂಧಿ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೇ ಜ.13ರಂದು ಪಕ್ಷದ ನಾಯಕರ ಸಭೆ ಕರೆದಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೇ ಜ.13ರಂದು ಪಕ್ಷದ ನಾಯಕರ ಸಭೆ ಕರೆದಿದ್ದಾರೆ.
ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ರಾಜ್ಯದ ಕಾಂಗ್ರೆಸ್ ನಾಯಕರ ಸಭೆ ಕರೆದಿದ್ದು, ಚುನಾವಣೆ ಸಿದ್ಧತೆ, ಆಯ್ಕೆ ಪಟ್ಟಿ ಬಗ್ಗೆ ಚರ್ಚೆ ನಡೆಸುವ ಸಂಭವವಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ದಿನೇಶ್ ಗುಂಡುರಾವ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ನಂತರ ಇದೇ ಜನವರಿ 27ರಂದು ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಲಿದ್ದು ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡದ್ದು, ಬಳ್ಳಾರಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಲಿದ್ದಾರೆ.