ಬಂಡೀಪುರ ಕಾಡಿನ ಮೂಲಕ ರಾಜ್ಯಕ್ಕೆ ರಾಗಾ ಎಂಟ್ರಿ; ನಾಯಕನನ್ನು ಸ್ವಾಗತಿಸಿದ ರಾಜ್ಯ ನಾಯಕರ ದಂಡು!!
ಭಾರತ್ ಜೋಡೋ ಯಾತ್ರೆ ಬೆಳಗ್ಗೆ 10.30 ರಿಂದ ಗುಂಡ್ಲುಪೇಟೆಯಲ್ಲಿ ಆರಂಭವಾಗಲಿದ್ದು 30 ಸಾವಿರಕ್ಕೂ ಹೆಚ್ಚು ಮಂದಿ ಈ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ನಿರೀಕ್ಷೆ ಇದೆ. ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಎದುರು ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದಾದ ಬಳಿಕ, ಭಾರತ್ ಜೋಡೋ ಪಾದಯಾತ್ರೆ ಮುಂದುವರೆಯಲಿದ್ದು ಸೋಲಿಗರು, ಆಕ್ಸಿಜನ್ ದುರಂತದ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ.
ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಂಡೀಪುರ ಅರಣ್ಯ ಪ್ರದೇಶದ ಮೂಲಕ ರಾಜ್ಯಕ್ಕೆ ಪ್ರವೇಶಿಸಿದೆ. ರಾಷ್ಟ್ರ ನಾಯಕ ರಾಹುಲ್ ಗಾಂಧಿ ಅವರನ್ನು ರಾಜ್ಯ ನಾಯಕರ ದಂಡೆ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ತೆರಳಿ ಸ್ವಾಗತಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಆರ್.ವಿ.ದೇಶಪಾಂಡೆ, ವೀರಪ್ಪ ಮೊಯಿಲಿ, ಕೆ.ಜೆ.ಜಾರ್ಜ್ ಸೇರಿದಂತೆ ಹತ್ತು ಹಲವು ನಾಯಕರುಗಳು ಈ ವೇಳೆ ಉಪಸ್ಥಿತರಿದ್ದರು.
ಭಾರತ್ ಜೋಡೋ ಯಾತ್ರೆ ಬೆಳಗ್ಗೆ 10.30 ರಿಂದ ಗುಂಡ್ಲುಪೇಟೆಯಲ್ಲಿ ಆರಂಭವಾಗಲಿದ್ದು 30 ಸಾವಿರಕ್ಕೂ ಹೆಚ್ಚು ಮಂದಿ ಈ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ನಿರೀಕ್ಷೆ ಇದೆ. ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಎದುರು ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದಾದ ಬಳಿಕ, ಭಾರತ್ ಜೋಡೋ ಪಾದಯಾತ್ರೆ ಮುಂದುವರೆಯಲಿದ್ದು ಸೋಲಿಗರು, ಆಕ್ಸಿಜನ್ ದುರಂತದ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ.
ಇದನ್ನೂ ಓದಿ- ಭಾರತ್ ಜೋಡೋ ಯಾತ್ರೆಗೆ ಖಾಕಿ ಅಲರ್ಟ್!!
ಭಾರತ್ ಜೋಡೋ ಯಾತ್ರೆ: 30 ಸಾವಿರ ಜನರಿಗೆ ಊಟ, ವಿಐಪಿಗಳ ವಿರಾಮಕ್ಕೆ 1000 ಹಾಸಿಗೆ ರೆಡಿ!!
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ 30 ಸಾವಿರದಷ್ಟು ಮಂದಿಗೆ ಅನ್ನ, ಸಾಂಬಾರ್, ಪಲಾವ್, ಬಜ್ಜಿ ವ್ಯವಸ್ಥೆ ಮಾಡಲಾಗಿದ್ದು ಈಗಾಗಲೇ ಹತ್ತಾರು ಸಾವಿರ ಮಂದಿಗೆ ಉಪ್ಪಿಟ್ಟು-ಕೇಸರಿಬಾತ್ ವಿತರಣೆ ಮಾಡಲಾಗಿದೆ.
ಇದನ್ನೂ ಓದಿ- ಭಾರತ್ ಜೋಡೋ ಯಾತ್ರೆಗೆ ಗುಂಡ್ಲುಪೇಟೆಯಲ್ಲಿ ಭರ್ಜರಿ ತಯಾರಿ
ಇನ್ನು, ಪಾದಯಾತ್ರೆಯಲ್ಲಿ ಭಾಗಿಯಾಗುವ 1000 ಮಂದಿ ವಿಐಪಿಗಳು ವಿರಮಿಸಿಕೊಳ್ಳಲು ಕೆಬ್ಬೆಕಟ್ಟೆ ಶನೀಶ್ವರ ದೇವಾಲಯದ ಬಳಿ ತಾತ್ಕಾಲಿಕ ಟೆಂಟ್ ಗಳನ್ನು ನಿರ್ಮಿಸಿ ಸಾವಿರ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಟೆಂಟ್ ಗಳಲ್ಲೇ ಮೀಟಿಂಗ್ ಹಾಲ್, ಭೋಜನ ವ್ಯವಸ್ಥೆ ಇರಲಿದ್ದು ಸಾಕಷ್ಟು ತಯಾರಿ ಮಾಡಿಕೊಳ್ಳಲಾಗಿದೆ. ವೇದಿಕೆ ನಿರ್ಮಾಣದ ಸ್ಥಳದಿಂದ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಬ್ಯಾನರ್, ಬಂಟಿಂಗ್ಸ್ ಆಕರ್ಷಕ ಧ್ವಜಗಳನ್ನು ಕಟ್ಟಿ ಸಿಂಗರಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.