ನವದೆಹಲಿ: ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲವೆಂದು ಅಸಮಾಧಾನಗೊಂಡು ಉಪಮುಖ್ಯಮಂತ್ರಿ ಹುದ್ದೆ ಬೇಕೆಂದು ಮಾಜಿ ಸಚಿವ ಎಂ ಬಿ ಪಾಟೀಲ್ ಪಟ್ಟು ಹಿಡಿದಿದ್ದರು. ಈ ಹಿನ್ನಲೆಯಲ್ಲಿ ಇಂದು ದೆಹಲಿಯಲ್ಲಿ ಹೈಕಮಾಂಡ್ ಜೊತೆ ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
ಆದರೆ ಈ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಒಪ್ಪಿಗೆ ನೀಡಿಲ್ಲ ವೆಂದು ತಿಳಿದುಬಂದಿದೆ.ಆ ಮೂಲಕ ಉಪಮುಖ್ಯಮಂತ್ರಿ ಹುದ್ದೆ ಪಡೆಯುವ ಕಾತರದಲ್ಲಿದ್ದ ಎಂ ಬಿ ಪಾಟೀಲ್ ಅವರಿಗೆ ತಣ್ಣೀರು ಎರೆಚಿದಂತಾಗಿದೆ. ಆದರೆ ಮಂತ್ರಿ ಮಾಡಿ ಅವರಿಗೆ ಪ್ರಬಲ ಖಾತೆಯನ್ನು ನೀಡುವ ಭರವಸೆಯನ್ನು ರಾಹುಲ್ ನೀಡಿದ್ದಾರೆ ಎಂದು ತಿಳಿದುಬಂದಿದೆ.ಅಲ್ಲದೆ ಭಿನ್ನಮತವನ್ನು ಇಲ್ಲಿಗೆ ನಿಲ್ಲಿಸಲು ಸೂಚನೆಯನ್ನು ಕೂಡ ನೀಡಿದ್ದಾರೆ.
ಸದ್ಯ ಕಾಂಗ್ರೆಸ್ ಪಕ್ಷ ಕಷ್ಟದ ಪರಿಸ್ಥಿತಿಯಲ್ಲಿದೆ,ರಾಜ್ಯದಲ್ಲಿ ಹಿರಿಯ ನಾಯಕರು ಎನಿಸಿಕೊಂಡವರು ಸಂಘಟನೆ ಮುಂದಾಗಿ ಮತ್ತು ಮೈತ್ರಿ ಸರ್ಕಾರದಲ್ಲಿ ಉತ್ತಮ ಆಡಳಿತ ನಡೆಸಲು ಗಮನ ಹರಿಸಿ ಎಂದು ರಾಹುಲ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ.