ಚಾಮರಾಜನಗರ : ಭಾರತ್ ಜೋಡೋ ಯಾತ್ರೆ ವಿರುದ್ದ ಮುಗಿಬಿದ್ದಿರುವ ಬಿಜೆಪಿಗರು ಈಗ ರಾಹುಲ್ ಗಾಂಧಿ,  ಸಿದ್ದರಾಮಯ್ಯ ವಿರುದ್ದ ಬಂಡೀಪುರ ಕಾಡಲ್ಲಿ ಕಾನೂನು ಉಲ್ಲಂಘಿಸಿದ್ದಾರೆಂದು ಗುಂಡ್ಲುಪೇಟೆ ಬಿಜೆಪಿ ಮಂಡಲ ಆರೋಪಿಸಿದೆ. 


COMMERCIAL BREAK
SCROLL TO CONTINUE READING

ಶುಕ್ರವಾರ  ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸುವಾಗ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹುಣಸೆಮರದ ರಸ್ತೆಯ ಬಳಿ ರಾಗಾ ಅವರನ್ನು   ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಜೆ. ಜಾರ್ಜ್ ,ಎಚ್ ಸಿ ಮಹದೇವಪ್ಪ  ಅರಣ್ಯ ನಿಯಮವನ್ನು ಗಾಳಿಗೆ ತೂರಿ ವಾಹನಗಳನ್ನು ನಿಲ್ಲಿಸಿ ಅವರನ್ನು ಸ್ವಾಗತಿಸಿದ್ದಾರೆಂದು ಆರೋಪಿಸಿದ್ದಾರೆ.


ಇದನ್ನೂ ಓದಿ : Video : ಸಂತ್ರಸ್ಥ ಮಗುವಿನ ಮಾತು ಕೇಳಿ ಕಣ್ಣೀರಿಟ್ಟ ಡಿಕೆ ಶಿವಕುಮಾರ್


ಕೈ ನಾಯಕರು ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿ  ಅರಣ್ಯ ನಡುವೆ ವಾಹನಗಳನ್ನು‌ ಪಾರ್ಕ್ ಮಾಡಿದ್ದಾರೆ ಇದು ಕಾಯ್ದೆಯಡಿ ಅಪರಾಧವಾಗಿದೆ,  ಸಾಮಾನ್ಯ ಪ್ರವಾಸಿಗರು ಕಾಡಿನ ರಸ್ತೆಯಲ್ಲಿ ವಾಹನಗಳನ್ನು ಪಾರ್ಕ್ ಮಾಡಿದ್ರೆ ದಂಡ ವಿಧಿಸಲಾಗುತ್ತದೆ ಕೈ ನಾಯಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಅಧಿಕಾರಿಗೆ ಮನವಿ ಬಿಜೆಪಿ ಮುಖಂಡರು ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ : ಸಂತ್ರಸ್ಥ ಕುಟುಂಬಕ್ಕೆ ಸರ್ಕಾರಿ ನೌಕರಿ ಭರವಸೆ ಕೊಟ್ಟ ರಾಹುಲ್ ಗಾಂಧಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.