COMMERCIAL BREAK
SCROLL TO CONTINUE READING

ಬೆಂಗಳೂರು: 2018ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನತೆಗೆ ಮುಟ್ಟಿಸಲು ಬಿಜೆಪಿ ಹಿಡಿತವಿರುವ ಪ್ರದೇಶಗಳಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನವೆಂಬರ್ 19 ರಿಂದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.


ಬಿಜೆಪಿ ಪ್ರಾಬಲ್ಯವಿರುವ ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. ಪಕ್ಷದ ಸಮಾವೇಶಗಳಲ್ಲಿ ರಾಹುಲ್ ಭಾಗವಹಿಸುವುದರಿಂದ ತಳಮಟ್ಟದಲ್ಲಿ ಕಾರ್ಯಕರ್ತರನ್ನು ಉತ್ತೇಜಿಸಬಹುದು ಎಂಬುದು ನಾಯಕರ ನಿರೀಕ್ಷೆಯಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.


ನವೆಂಬರ್ 19ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿರುವ ರಾಹುಲ್, ಮೊದಲನೇ ದಿನ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಇಂದಿರಾ ಗಾಂಧಿ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮರುದಿನ ಅದೇ ಜಿಲ್ಲೆಯಲ್ಲಿ ನಡೆಯಲಿರುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅಂದೇ ಮಧ್ಯಾಹ್ನ ಶಿವಮೊಗ್ಗದಲ್ಲಿ ಪಕ್ಷದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ನ.21 ರಂದು ಕುಮಟಾದಲ್ಲಿ ನಡೆಯಲಿರುವ ರಾಜ್ಯಮಟ್ಟದ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.