ಆಗಸ್ಟ್ 13ರಂದು ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನ
ಲೋಕಸಭೆ ಚುನಾವಣೆ ಪ್ರಚಾರಕ್ಕೆ ಕರ್ನಾಟಕದಿಂದಲೇ ಚಾಲನೆ
ಬೀದರ್: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಸ್ಟ್ 13ರಂದು ಬೀದರ್ ಗೆ ಆಗಮಿಸಲಿದ್ದು, ಲೋಕಸಭೆ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಿಂದಲೇ ವಿದ್ಯುಕ್ತ ಚಾಲನೆ ನೀಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಭಾನುವಾರ ಬೀದರ್ ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಖಂಡ್ರೆ, ಆಗಸ್ಟ್ 13 ರಂದು ಬೆಳಿಗ್ಗೆ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಲಾಗುವುದು, ಕಾರ್ಯಕ್ರಮದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆ ಇದೇ ಎಂದರು.
ಡಿಸೆಂಬರ್ ಅಥವಾ ಜನವರಿಯಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಚುನಾವಣಾ ಪೂರ್ವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಿಶ್ಚಿತ ಎಂದು ಖಂಡ್ರೆ ಇದೇ ಸಂದರ್ಭದಲ್ಲಿ ಘೋಷಿಸಿದರು.