ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷ ಗಳ ಟ್ವಿಟರ್ ವಾರ್ ಮುಂದುವರೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ನಾಯಕರು ಕೋಳಿ ತಿಂದು ದೇವಸ್ಥಾನಕ್ಕೆ ಹೋಗುತ್ತಾರೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ಜನಾಶೀರ್ವಾದ ಯಾತ್ರೆ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜವಾರಿ ಕೋಳಿ ತಿಂದು ನರಸಿಂಹಸ್ವಾಮಿ ದರ್ಶನಕ್ಕೆ ತೆರಳಿದ್ದಾರೆ ಎಂದು ಆರೋಪಿಸಿದ್ದಾರೆ.
"ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ ಸಿಎಂ ಸಿದ್ದರಾಮಯ್ಯ ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ ರಾಹುಲ್ ಗಾಂಧಿ ಮತ್ತೊಂದು ಕಡೆ. ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ?" ಎದ್ನು ಪ್ರಶ್ನಿಸಿದ್ದಾರೆ. ಅಲ್ಲದೆ, ಇದು ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದೆ. ಎಲ್ಲರನ್ನು ಸಮಾನವಾಗಿ ಕಾಣುವುದು ಸಮಾಜವಾದ ಎನಿಸಿಕೊಳ್ಳುತ್ತದೆ. ಆದರೆ ನಿಮ್ಮದು ಮಜಾವಾದ ಎಂದು ಯಡಿಯೂರಪ್ಪ ಟ್ವೀಟ್ ನಲ್ಲಿ ಜರಿದಿದ್ದಾರೆ.
ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆಯೋ #10PercentCM @siddaramaiah ಒಂದೆಡೆಯಾದರೆ, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿಯ ದರ್ಶನ ಪಡೆಯೋ #ElectionHindu @OfficeOfRG ಮತ್ತೊಂದು ಕಡೆ.
ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಕಾಂಗ್ರೆಸ್ ಧಕ್ಕೆ ತರುತ್ತಿದೆ? ಎಲ್ಲರನ್ನೂ ಸಮನಾಗಿ ಕಾಣುವುದು ಸಮಾಜವಾದ, ನಿಮ್ಮದು ಮಜಾವಾದ. pic.twitter.com/t4AP8GJvzl— B.S. Yeddyurappa (@BSYBJP) February 12, 2018