ಬೆಂಗಳೂರು: ಗಾಂಧಿ ಕುಟುಂಬ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸುವುದು ಹೊಸದೇನಲ್ಲ,ಏಕೆಂದರೆ ಈ ಹಿಂದೆ ಒಮ್ಮೆ ಇಂದಿರಾಗಾಂಧಿ ಚಿಕ್ಕಮಂಗಳೂರಿನಿಂದ ಸ್ಪರ್ಧಿಸಿ ರಾಜಕೀಯ ಪುನರ್ಜನ್ಮ ಪಡೆದಿದ್ದರೆ,ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿ ರಾಜಕೀಯಕ್ಕೆ  ಪ್ರವೇಶಿಸಿದ್ದರು. ಈಗ ಎಲ್ಲವೂ ಅಂದುಕೊಂಡಂತೆ ಆದಲ್ಲಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.


COMMERCIAL BREAK
SCROLL TO CONTINUE READING

ಈ ಬಾರಿ ರಾಹುಲ್ ಗಾಂಧಿಯವರಿಗೆ ಸ್ವಕ್ಷೇತ್ರ ಅಮೇಥಿಯಲ್ಲಿ  ಕೇಂದ್ರ ಸಚಿವೆ  ಸ್ಮೃತಿ ಇರಾನಿ ತೀವ್ರ ಸ್ಪರ್ಧೆ ನೀಡಲಿದ್ದಾರೆ ಇದಕ್ಕೆ ಪೂರಕವಾಗಿ ಈಗಾಗಲೇ ಅವರು ಹಲವಾರು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿ ಸರ್ಕಾರದ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರು ಕಳೆದ ಬಾರಿ ಲೋಕಸಭೆಗೆ ಅತಿ ಕಾಂಗ್ರೆಸ್ ನ ಅತಿ ಹೆಚ್ಚು ಸಂಸದರನ್ನು ಆಯ್ಕೆ ಮಾಡಿದ ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.ಅದರಲ್ಲೂ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.ಇದಕ್ಕೆ ಪುಷ್ಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ್ ಪಾಟೀಲ್ ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಇದನ್ನು ಖಚಿತ ಪಡಿಸಿದೆ.


ಈಗಾಗಲೇ  ಲೋಕಸಭೆ ಚುನಾವಣೆ ಸಿದ್ದತೆ ವಿಚಾರವಾಗಿ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ದಿನೇಶ್ ಗುಂಡುರಾವ್ ಮತ್ತು ಈಶ್ವರ್ ಖಂಡ್ರೆ  ಡಿಕೆ ಶಿವಕುಮಾರ್ ಜಿಲ್ಲಾವಾರು ಮುಖಂಡರ ಸಭೆಯನ್ನು ನಡೆಸಿದ್ದಾರೆ.